Tuesday, August 4, 2026

BDA Apartments

Home Crime ಶಾಸಕ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್ : ಜೈಲು ಶಿಕ್ಷೆಗೆ ತಡೆ , ಜಾಮೀನು ಮಂಜೂರು

ಶಾಸಕ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್ : ಜೈಲು ಶಿಕ್ಷೆಗೆ ತಡೆ , ಜಾಮೀನು ಮಂಜೂರು

ತೆಲಂಗಾಣ, ಜೂನ್, 11,2025 (www.justkannada.in): ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಗಂಗಾವತಿ ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗಿ ರಿಲೀಫ್ ಸಿಕ್ಕಿದ್ದು, ಸಿಬಿಐ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೈಲಿಶಿಕ್ಷೆಗೆ ತೆಲಂಗಾಣ ಹೈಕೋರ್ಟ್ ತಡೆ ನೀಡಿ ಜಾಮೀನು ಮಂಜೂರು ಮಾಡಿದೆ.

ಅವಿಭಜಿತ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಮತ್ತು ಅವರ ಸಂಬಂಧಿ ಓಬಳಾಪುರಂ ಮೈನಿಂಗ್ ಕಾರ್ಪೊರೇಷನ್ (ಒಎಂಸಿ) ವ್ಯವಸ್ಥಾಪಕ ನಿರ್ದೇಶಕ ಬಿ.ವಿ. ಶ್ರೀನಿವಾಸ್ ರೆಡ್ಡಿ ಸೇರಿದಂತೆ ನಾಲ್ವರಿಗೆ ಹೈದರಾಬಾದ್‌ ನಲ್ಲಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ವಿಶೇಷ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.

ಸುಮಾರು 16 ವರ್ಷಗಳ ಹಿಂದೆ ಈ ಪ್ರಕರಣವನ್ನು ಸಿಬಿಐ ದಾಖಲಿಸಿತ್ತು. ಪ್ರಕರಣ ದಾಖಲಾಗುವ ಸಮಯದಲ್ಲಿ ಆಂಧ್ರಪ್ರದೇಶ ಗೃಹ ಸಚಿವೆಯಾಗಿದ್ದ ಸಬಿತಾ ಇಂದ್ರಾ ರೆಡ್ಡಿ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಬಿ ಕೃಪಾನಂದಂ ವಿರುದ್ಧದ ಆರೋಪಗಳನ್ನು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಖುಲಾಸೆಗೊಳಿಸಲಾಗಿತ್ತು.

ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ  ಗಾಲಿ ಜನಾರ್ಧನ ರೆಡ್ಡಿ ತೆಲಂಗಾಣ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಕುರಿತು ವಿಚಾರಣೆ ನಡೆಸಿದ ತೆಲಂಗಾಣ ಹೈಕೋರ್ಟ್ ಜನಾರ್ದನ ರೆಡ್ಡಿಗೆ ವಿಧಿಸಿದ್ದ ಜೈಲು ಶಿಕ್ಷೆಗೆ ತಡೆ ನೀಡಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

10 ಲಕ್ಷ ರೂ . ಮೌಲ್ಯದ 2  ಶ್ಯೂರಿಟಿ ನೀಡಬೇಕು. ಪಾಸ್ ಪೋರ್ಟ್ ವಶಕ್ಕೆ ನೀಡಬೇಕು. ದೇಶ ಬಿಟ್ಟು ಹೋಗದಂತೆ ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್ ಸೂಚನೆ ನೀಡಿದೆ.vtu

Key words: MLA Janardhana Reddy,  Jail sentence, stayed, bail, High court