ಬಿಜೆಪಿಯಿಂದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಉಚ್ಛಾಟನೆ.

ದಾವಣಗೆರೆ,ಮಾರ್ಚ್,7,2023(www.justkannada.in): ಲೋಕಾಯುಕ್ತ ದಾಳಿ ವೇಳೆ ಪುತ್ರನ ಮನೆಯಲ್ಲಿ  8 ಕೋಟಿ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪರನ್ನ ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮುಜುಗರ ತಪ್ಪಿಸಿಕೊಳ್ಳಲು ಬಿಜೆಪಿ ಕೇಂದ್ರ ಶಿಸ್ತು ಸಮಿತಿಯು ಶಾಸಕ ಮಾಡಾಳ್ ವಿರೂಪಾಕ್ಷಪ್ಪರನ್ನ ಪಕ್ಷದಿಂದ ಉಚ್ಚಾಟನೆ ಮಾಡಿದೆ ಎನ್ನಲಾಗಿದೆ. ಈ ಕುರಿತು ಸ್ವತಃ ಮಾಡಾಳ್ ವಿರೂಪಾಕ್ಷಪ್ಪ ಅವರೇ ಪ್ರತಿಕ್ರಿಯೆ ನೀಡಿದ್ದು, ನನ್ನನ್ನ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ದಾರೆ. ಈ ಶಿಸ್ತು ಕ್ರಮವನ್ನ ಒಪ್ಪಿಕೊಳ್ಳುತ್ತೇನೆ ಎಂದಿದ್ದಾರೆ.

Key words: MLA- Madal Virupakshappa- expelled – BJP.