ಶಾಸಕ ಮಾಡಾಳ್ ವಿರೂಪಾಕ್ಷಪ್ಪ 5 ದಿನಗಳ ಕಾಲ ಲೋಕಾಯುಕ್ತ ಕಸ್ಟಡಿಗೆ.

ಬೆಂಗಳೂರು,ಮಾರ್ಚ್,28,2023(www.justkannada.in):  ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರನ್ನ 5 ದಿನಗಳ ಕಾಲ ಲೋಕಾಯುಕ್ತ ಕಸ್ಟಡಿಗೆ ನೀಡಿ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಲೋಕಾಯುಕ್ತ ದಾಳಿ ವೇಳೆ ಪುತ್ರ ಪ್ರಶಾಂತ್ ಮಾಡಾಳ್ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿಯಲ್ಲ ಕೋರ್ಟ್ ವಜಾ ಮಾಡಿತ್ತು.

ನಂತರ ಲೋಕಾಯುಕ್ತ ಪೊಲೀಸರು ಶಾಸಕ ಮಾಡಾಳ್ ವಿರೂಪಾಕ್ಷಪ್ಪರನ್ನ ಬಂಧಿಸಿ ಇಂದು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇದೀಗ ಏಪ್ರಿಲ್ 1ರವರೆಗೆ ಮಾಡಾಳ್ ವಿರೂಪಾಕ್ಷಪ್ಪರನ್ನ ಲೋಕಾಯುಕ್ತ ವಶಕ್ಕೆ ನೀಡಿ ಜಡ್ಜ್ ಬಿ ಜಯಂತ್ ಕುಮಾರ್ ಆದೇಶ ನೀಡಿದ್ದಾರೆ.

Key words: MLA- Madal Virupakshappa – Lokayukta -custody -5 days.