ಗೃಹಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಮಹೇಶ್ ಕುಮುಟಳ್ಳಿ ಪಟ್ಟು…?

ಬೆಂಗಳೂರು,ಫೆ,10,2020(www.justkannada.in):  ಉಪಚುನಾವಣೆಯಲ್ಲಿ ಗೆದ್ದ 11 ನೂತನ ಶಾಸಕರ ಪೈಕಿ 10 ಮಂದಿ ಶಾಸಕರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಸಚಿವ ಸ್ಥಾನವನ್ನ ನೀಡಿ ಇದೀಗ ಖಾತೆ ಹಂಚಿಕೆಯನ್ನೂ ಮಾಡಿ ಮುಗಿಸಿದ್ದಾರೆ. ಈ ನಡುವೆ ಸಚಿವ ಸ್ಥಾನದಿಂದ ವಂಚಿತರಾಗಿರುವ ಶಾಸಕ ಮಹೇಶ್ ಕುಮುಟಳ್ಳಿ ಗೃಹಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಶಾಸಕ ಮಹೇಶ್ ಕುಮುಟಳ್ಳಿ ಸಿಎಂ ಬಿಎಸ್ ಯಡಿಯೂರಪ್ಪ ಬಳಿ ಗೃಹ ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಜತೆಗೆ ಸಂಪುಟ ದರ್ಜೆ ಸ್ಥಾನಮಾನ ನೀಡುವಂತೆಯೂ ಶಾಸಕ ಮಹೇಶ್ ಕುಮುಟಳ್ಳಿ ಮನವಿ ಸಲ್ಲಿಸಿದ್ದಾರೆ.

ಆದರೆ ಶಾಸಕ ಮಹೇಶ್ ಕುಮುಟಳ್ಳಿಗೆ ಕ್ಯಾಬಿನೆಟ್ ಸ್ಥಾನ ಮಾನ ಜತೆಗೆ  ಎಂಎಸ್ ಐಎಲ್ ಅಧ್ಯಕ್ಷ ಸ್ಥಾನ ನೀಡಲು ಸಿಎಂ  ಬಿಎಸ್ ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ. ಇನ್ನು ಮಂತ್ರಿಗಿರಿ ಸಿಗುವ ನಿರೀಕ್ಷೆಯಲ್ಲಿದ್ದ ಮಹೇಶ್ ಕುಮುಟಳ್ಳಿಗೆ ಬಿಜೆಪಿ ಹೈಕಮಾಂಡ್ ಶಾಕ್ ನೀಡಿತ್ತು. ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ಗೃಹಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಮಹೇಶ್ ಕುಮುಟಳ್ಳಿ ಸಿಎಂ ಬಿಎಸ್ ವೈ ಬಳಿ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.

Key words: MLA-Mahesh Kumutalli – housing Board –Chairperson-position- cm bs yeddyurappa