ಲೋಕಾಯುಕ್ತ ವಿಚಾರಣೆಗೆ ಹಾಜರಾದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ.

ಬೆಂಗಳೂರು,ಮಾರ್ಚ್,9,2023(www.justkannada.in):  ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ.

ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ವಕೀಲರೊಂದಿಗೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿಚಾರಣೆಗೆ ಹಾಜರಾಗಿದ್ದು,  ಕೆಎಸ್ ಡಿಎಲ್ , ಟೆಂಡರಿಂಗ್  ಬಗ್ಗೆ  ಲೊಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ ಎನ್ನಲಾಗಿದೆ.

ಡಿವೈಎಸ್ ಪಿ ಅಂಥೋನಿ ಜಾನ್ ರಿಂದ ವಿಚಾರಣೆ ನಡೆಯಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹೈಕೋರ್ಟ್ ನಿಂದ ಮಾಡಾಳ್ ವಿರೂಪಾಕ್ಷಪ್ಪಗೆ ಮಧ್ಯಂತರ ಜಾಮೀನು ಮಂಜೂರಾಗಿದೆ.

Key words: MLA -Modal Virupakshappa- attended –Lokayukta- hearing.