ನಾವು ಪಕ್ಷ ಬಿಟ್ಟಿದ್ರೂ ಸಹ ಸಿದ್ದು ನಮ್ಮ ನಾಯಕರು- ಸಿದ್ಧರಾಮಯ್ಯ ಆರೋಗ್ಯ ವಿಚಾರಿಸಿದ ಬಳಿಕ ರಮೇಶ್ ಜಾರಕಿಹೊಳಿ ಹೇಳಿಕೆ…

ಬೆಂಗಳೂರು,ಡಿ,13,2019(www.justkannada.in): ನಾವು ಪಕ್ಷವನ್ನ ಬಿಟ್ಟರೂ ಈಗಲೂ ಸಹ ಸಿದ್ಧರಾಮಯ್ಯ ಅವರು ನಮ್ಮ ನಾಯಕರು ಎಂದು ಶಾಸಕ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಮಾಜಿ ಸಿಎಂ ಸಿದ್ಧರಾಮಯ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿದ್ದರಾಮಯ್ಯಗೆ ಆಂಜಿಯೋ ಪ್ಲಾಸ್ಟಿ ಮಾಡಲಾಗಿದ್ದು ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ನಡುವೆ ಹಲವು ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಸಿದ್ಧರಾಮಯ್ಯ ಅವರ ಆರೋಗ್ಯವನ್ನ ವಿಚಾರಿಸುತ್ತಿದ್ದಾರೆ.

ಅಂತೆಯೇ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಇಂದು ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಬಳಿಕ ಮಾಧ್ಯಮದ ಜತೆ ಮಾತನಾಡಿದ ರಮೇಶ್ ಜಾರಕಿಹೊಳಿ, ಸಿದ್ಧರಾಮಯ್ಯ ಆರೋಗ್ಯವಾಗಿದ್ದಾರೆ. ಅವರು ಬೇಗ ಗುಣಮುಖರಾಗಲಿ ಎಂದು ಹಾರೈಸಿದರು.

ಹಾಗೆಯೇ ನಾವು ಪಕ್ಷ ಬಿಟ್ಟಿರಬಹುದು. ಆದರೆ ಸಿದ್ಧರಾಮಯ್ಯ ನಮ್ಮ ನಾಯಕರು. ನಮ್ಮ ಗುರುಗಳು. ಚುನಾವಣೆಯಲ್ಲಿ ಗೆದ್ದಾಗಲೂ ಸಿದ್ಧರಾಮಯ್ಯ ನಮ್ಮ ನಾಯಕರು ಎಂದು ಹೇಳಿದ್ದೆ. ಈಗಲೂ ಅದನ್ನೇ ಹೇಳುತ್ತೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದರು.

ನಿನ್ನೆ ಸಿಎಂ ಬಿಎಸ್ ಯಡಿಯೂರಪ್ಪ ಸಚಿವರಾದ ಕೆ.ಎಸ್ ಈಶ್ವರಪ್ಪ, ಬಸವರಾಜ ಬೊಮ್ಮಾಯಿ ಅವರು ಸಿದ್ಧರಾಮಯ್ಯ ಅವರನ್ನ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು.

Key words:  MLA-ramesh jarkiholi-visit-hospital-sidddaramaiha- health