ಬೆಂಗಳೂರು,ಡಿಸೆಂಬರ್,23,2025 (www.justkannada.in): ಅಧಿಕಾರ ಹಂಚಿಕೆ ಒಪ್ಪಂದ ಆಗಿದೆ ಅಂತಾ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದಾರೆ. ಅದು ಮುಂದಿನ ದಿನಗಳಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ಕುಣಿಗಲ್ ಶಾಸಕ ರಂಗನಾಥ್ ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ರಂಗನಾಥ್, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅಣ್ಣ ತಮ್ಮಂದಿರ ರೀತಿ ಕೆಲಸ ಮಾಡುತ್ತಿದ್ದಾರೆ. ಈ ಬಗ್ಗೆ ಸೂಕ್ತ ಸಂದರ್ಭದಲ್ಲಿ ನಿರ್ಧಾರ ತೆಗದು ಕೊಳ್ಳುತ್ತಾರೆ ಎಂದರು.
ಡಿಕೆ ಶಿವಕುಮಾರ್ ದೆಹಲಿ ಭೇಟಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಶಾಸಕ ರಂಗನಾಥ್, ರಾಜ್ಯದ ನೀರಾವರಿ ಯೋಜನೆಗಳ ಸಂಬಂಧ ದೆಹಲಿಗೆ ಭೇಟಿ ನೀಡುತ್ತಾರೆ. ಕೇಂದ್ರ ಜಲಸಂಪನ್ಮೂಲ ಇಲಾಖೆ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.
ನಮ್ಮ ತಾಲ್ಲೂಕಿನ ರೈತರಿಗೆ ಅನ್ಯಾಯ ಆಗಲು ನಾವು ಬಿಡುವುದಿಲ್ಲ. ನಮ್ಮ ರೈತರ ಸಮಸ್ಯೆ ಬಗ್ಗೆ ಸಿದ್ದರಾಮಯ್ಯಗೆ ಮನವರಿಕೆ ಮಾಡಿಕೊಟ್ಟಿದ್ದೇನೆ. ಈ ಬಗ್ಗೆ ಸಿಎಂ ಪರಿಶೀಲಿಸುವ ಬಗ್ಗೆ ವಿಶ್ವಾಸವಿದೆ ಎಂದು ಶಾಸಕ ರಂಗನಾಥ್ ತಿಳಿಸಿದರು.
Key words: DK Shivakumar, power, agreement, MLA, Ranganath







