ಬೆಂಗಳೂರು,ಜನವರಿ,7,2026 (www.justkannada.in): ದೀರ್ಘಾವಧಿ ಮುಖ್ಯಮಂತ್ರಿ ಆಗುವ ಮೂಲಕ ಮಾಜಿ ಸಿಎಂ ದಿ.ಡಿ.ದೇವರಾಜ ಅರಸು ಅವರ ದಾಖಲೆ ಸರಿಗಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕುಣಿಗಲ್ ಕಾಂಗ್ರೆಸ್ ಶಾಸಕ ರಂಗನಾಥ್ ಶುಭಹಾರೈಸಿದ್ದಾರೆ.
ಈ ಕುರಿತು ಮಾತನಾಡಿರುವ ಶಾಸಕ ರಂಗನಾಥ್, ಸಿದ್ದರಾಮಯ್ಯ ಅವರು ದೀರ್ಘಾವಧಿ ಸಿಎಂ ಆಗಿದ್ದಾರೆ. ಸಿಎಂ ಸಿದ್ದರಾಮಯ್ಯ ಹೆಚ್ಚು ಆಯವ್ಯಯ ಮಂಡನೆ ಮಾಡಿದ್ದಾರೆ. ಸಿದ್ದರಾಮಯ್ಯಗೆ ಶುಭವಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
ನಾನು ಇಲ್ಲದಿದ್ದರೂ ಕಾಂಗ್ರೆಸ್ ಪಕ್ಷ ಇರುತ್ತೆ. ಸಿದ್ದರಾಮಯ್ಯ ದೊಡ್ಡ ನಾಯಕ. ಡಿಕೆ ಶಿವಕುಮಾರ್ ಅಧ್ಯಕ್ಷರಾದ ಬಳಿಕ 140 ಸೀಟ್ ಬಂದಿದೆ. ಸಿದ್ದರಾಮಯ್ಯ ಡಿಕೆ ಶಿವಕುಮಾರ್ ನಾಯಕತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ. ಮುಂದಿನ ಚುನಾವಣೆಯಲ್ಲೂ ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಶಾಸಕ ರಂಗನಾಥ್ ತಿಳಿಸಿದರು.
Key words: Record, longest, CM, MLA, Ranganath, congratulates, Siddaramaiah







