ಡಿ.ಕೆ ಶಿವಕುಮಾರ್ ಸಿಎಂ ಆಗಬೇಕು ಎನ್ನುವುದು ನನ್ನ ಅಭಿಪ್ರಾಯ- ಶಾಸಕ ರವಿ ಗಣಿಗ

ಮಂಡ್ಯ,ನವೆಂಬರ್,22,2025 (www.justkannada.in): ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗವೇಕು ಎಂಬುದು ನನ್ನ ಅಭಿಪ್ರಾಯ ಎಂದು ಶಾಸಕ ರವಿ ಗಣಿಗ ಹೇಳಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ರವಿ ಗಣಿಗ, ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂಬುದು ನನ್ನ ಅಭಿಪ್ರಾಯ. ಅದಕ್ಕೊಂದು ಸಂದರ್ಭ ಬರುತ್ತದೆ.  ಒಂದು ವೇಳೆ ಮಾತುಕೊಟ್ಟಿದ್ದರೆ ಅದರಂತೆ ನಡೆದುಕೊಳ್ಳಲಿ.  ಹೈಕಮಾಂಡ್ ತೀರ್ಮಾನಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಬದ್ಧ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಜೊತೆ 140 ಶಾಸಕರು ಇದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ಅಧಿಕಾರ ಹಂಚಿಕೆ ,ಸಂಪುಟ ಪುನಾರಚನೆ ಕುರಿತು ಸಾಕಷ್ಟು ಚರ್ಚೆಗಳಾಗುತ್ತಿದ್ದು ಡಿಸಿಎಂ ಕೆಲ ಶಾಸಕರು, ಸಚಿವರು  ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿ ಮಾಡಿದ್ದಾರೆ.

Key words:  My opinion, D.K. Shivakumar, become. CM, MLA Ravi Ganiga