Wednesday, August 12, 2026

BDA Apartments

Home Front Page ಬಿಎಸ್ ವೈ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಶಾಸಕ ರೋಷನ್ ಬೇಗ್  ಹಾಜರು…

ಬಿಎಸ್ ವೈ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಶಾಸಕ ರೋಷನ್ ಬೇಗ್  ಹಾಜರು…

ಬೆಂಗಳೂರು,ಜು,26,2019(www.justkannada.in):  ರಾಜ್ಯದ ನೂತನ ಸಿಎಂ ಆಗಿ ಬಿ.ಎಸ್ ಯಡಿಯೂರಪ್ಪ ಇಂದು ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದು ಈ ಸಮಾರಂಭಕ್ಕೆ ಶಿವಾಜಿನಗರದ ಕಾಂಗ್ರೆಸ್ ಶಾಸಕ ರೋಷನ್ ಬೇಗ್ ಆಗಮಿಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ವಿರುದ್ದ ಅಸಮಾಧಾನಗೊಂಡು ಪಕ್ಷದಿಂದ ಕಾಂಗ್ರೆಸ್ ಪಕ್ಷದಿಂದ ಅಮಾನತಾಗಿದ್ದಾರೆ. ಹಾಗೆಯೇ ತಮ್ಮ ಶಾಸಕ ಸ್ಥಾನಕ್ಕೆ ರೋಷನ್ ಬೇಗ್ ರಾಜೀನಾಮೆ ನೀಡಿದ್ದಾರೆ. ಈ ನಡುವೆ ರೋಷನ್ ಬೇಗ್ ಬಿಜೆಪಿ ಸೇರುತ್ತಾರೆಂಬ ಸುದ್ದಿ ಹರಡಿತ್ತು.

ಇದೀಗ ಇದಕ್ಕೆ ಪುಷ್ಠಿ ನೀಡುವಂತೆ  ರೋಷನ್ ಬೇಗ್ ಅವರು ಬಿಎಸ್ ಯಡಿಯೂರಪ್ಪ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸಿದ್ದಾರೆ.  ರಾಜಭವನದ ಗಾಜಿನ ಮನೆಯಲ್ಲಿ ರೋಷನ್ ಬೇಗ್  ಇದ್ದು ಬಿಜೆಪಿ ನಾಯಕರ ಜತೆ ಗುರುತಿಸಿಕೊಂಡಿದ್ದಾರೆ.

Key words: MLA- Roshan Beg -attends -BSY –swearing-function