ರಾಜಕೀಯ ನಿವೃತ್ತಿ ಹಿಂಪಡೆದ ಶಾಸಕ ಎಸ್.ಅಂಗಾರ: ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ನಿರ್ಧಾರ.

ಮಂಗಳೂರು,ಏಪ್ರಿಲ್,14,2023(www.justkannada.in):  ಸುಳ್ಯ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬೇಸರಗೊಂಡು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದ ಬಿಜೆಪಿ ಶಾಸಕ ಎಸ್. ಅಂಗಾರ ಇದೀಗ ತಮ್ಮ ನಿರ್ಧಾರವನ್ನ ಬದಲಾಯಿಸಿದ್ದಾರೆ.

ಹೌದು  ಶಾಸಕ ಎಸ್​. ಅಂಗಾರ ರಾಜಕೀಯ ನಿವೃತ್ತಿಯನ್ನ ಹಿಂಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬಿಜೆಪಿ ಕಾರ್ಯಕರ್ತರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಈ ನಿರ್ಧಾರವನ್ನು ಹಿಂಪಡೆದಿದ್ದಾರೆ.

ತಮಗೆ ಬಿಜೆಪಿ ಟಿಕೆಟ್​​ ಕೈ ತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಅಕ್ರೋಶ ವ್ಯಕ್ತಪಡಿಸಿ ರಾಜಿಕೀಯ ನಿವೃತ್ತಿ ಘೋಷಿಸಿದ್ದರು. ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಪರ ಪ್ರಚಾರ ಮಾಡಲ್ಲ ಎಂದಿದ್ದರು. ಹಿರಿಯ ನಾಯಕರು ಮಾತುಕತೆ ನಡಸಿ ಮನವೊಲಿಸಿದ ನಂತರ ಅಂಗಾರ ಅವರು  ತಮ್ಮ ನಿರ್ಧಾರ ಬದಲು ಮಾಡಿದ್ದಾರೆ.

ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಹೇಳಿಕೆ ನೋವಿನಿಂದ ಹೇಳಿದ್ದೇನೆ. ನಾನು ಮೊದಲಿನಂತೆ ಸಕ್ರಿಯವಾಗಿದ್ದು, ಭಾಗೀರಥಿ ಮುರುಳ್ಯ ಅವರ ಗೆಲುವೊಂದೇ ನಮ್ಮ ಮುಂದಿನ ನಡೆ. ವೈಯಕ್ತಿಕವಾಗಿ ನೀಡಿದ ಆ ಹೇಳಿಕೆ ಹಿಂದಕ್ಕೆ ಪಡೆಯುತ್ತಿದ್ದೇನೆ ಎಂದು ಅಂಗಾರ ಹೇಳಿದ್ದಾರೆ.

Key words:  MLA- S. Angara-Decision –change- campaign – BJP candidate.