Monday, September 21, 2026

BDA Apartments

ಕ್ಷೇತ್ರದ ಅಭಿವೃದ್ದಿಗೋಸ್ಕರ ಕಾಂಗ್ರೆಸ್ ಗೆ ಮತ ಹಾಕಿದ್ದೇನೆ-ಶಾಸಕ ಎಸ್.ಟಿ ಸ...
Home Front Page ಕ್ಷೇತ್ರದ ಅಭಿವೃದ್ದಿಗೋಸ್ಕರ ಕಾಂಗ್ರೆಸ್ ಗೆ ಮತ ಹಾಕಿದ್ದೇನೆ-ಶಾಸಕ ಎಸ್.ಟಿ ಸೋಮಶೇಖರ್

ಕ್ಷೇತ್ರದ ಅಭಿವೃದ್ದಿಗೋಸ್ಕರ ಕಾಂಗ್ರೆಸ್ ಗೆ ಮತ ಹಾಕಿದ್ದೇನೆ-ಶಾಸಕ ಎಸ್.ಟಿ ಸೋಮಶೇಖರ್

ಬೆಂಗಳೂರು,ಜೂನ್,18,2026 (www.justkannada.in): ಇಂದು 7 ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು ಶಾಸಕ ಎಸ್.ಟಿ ಸೋಮಶೇಖರ್ ಅವರು ಕ್ಷೇತ್ರದ ಅಭಿವೃದ್ದಿಗೋಸ್ಕರ ಕಾಂಗ್ರೆಸ್ ಗೆ ಮತ ಹಾಕಿದ್ದೇನೆ ಎಂದು ಹೇಳಿದ್ದಾರೆ.

ವಿಧಾನಸೌಧದಲ್ಲಿ ಮತದಾನ ಮಾಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಎಸ್.ಟಿ ಸೋಮಶೇಖರ್,  ನನ್ನ ಆತ್ಮಸಾಕ್ಷಿ ಮತವನ್ನ ಕಾಂಗ್ರೆಸ್ ಗೆ ಹಾಕಿದ್ದೇನೆ. ನಿನ್ನೆವರೆಗೂ ನನ್ನನ್ನು ಯಾರೂ ಸಂಪರ್ಕ ಮಾಡಿರಲಿಲ್ಲ ಸಂಜೆ ಸಿಎಂ ಡಿಕೆ ಶಿವಕುಮಾರ್ ಕರೆ ಮಾಡಿ ಮನವಿ ಮಾಡಿದರು.   ಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ಗೆ ಮತ ಹಾಕುವಂತೆ ಮನವಿ ಮಾಡಿದರು. ಹೀಗಾಗಿ ಕ್ಷೇತ್ರದ ಅಭಿವೃದ್ದಿಗೋಸ್ಕರ ಕಾಂಗ್ರೆಸ್ ಗೆ ಮತ ಹಾಕಿದ್ದೇನೆ ಎಂದರು.ಕ್ಷೇತ್ರದ ಅಭಿವೃದ್ದಿಗೋಸ್ಕರ ಕಾಂಗ್ರೆಸ್ ಗೆ ಮತ ಹಾಕಿದ್ದೇನೆ voting

ನೂರಕ್ಕೆ ನೂರರಷ್ಟು ಕಾಂಗ್ರೆಸ್ ಐವರು ಅಭ್ಯರ್ಥಿಗಳು ಗೆಲ್ಲುತ್ತಾರೆ.  ಈ ಹಿಂದೆ ನಾವು ಬಿಜೆಪಿಗೆ ಹೋಗಿದ್ದಕ್ಕೆ ಸರ್ಕಾರ ಬಂದಿದ್ದು ಎಂದು ಬಿಜೆಪಿ ನಾಯಕರಿಗೆ ಎಸ್.ಟಿ ಸೋಮಶೇಖರ್ ಟಾಂಗ್ ಕೊಟ್ಟರು.ಶಾಸಕ ಎಸ್.ಟಿ ಸೋಮಶೇಖರ್ jk02_new jk02 new

Key words: I, voted, Congress, MLA, S.T. Somashekar