ಶಾಸಕ ಸ್ಥಾನ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ: ನಿರ್ಧಾರ ಪ್ರಕಟಿಸಿದ ಜಗದೀಶ್ ಶೆಟ್ಟರ್

ಬೆಂಗಳೂರು, ಏಪ್ರಿಲ್ 16, 2023 (www.justkannada.in): ಮಾಜಿ ಸಿಎಂ ಜಗದೀಶ್ ಶೆಟ್ಟರ್ ಶಾಸಕ ಸ್ಥಾನಕ್ಕೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ.

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದಿಂದ ಹಿಂದೆ ಸರಿಯುವಂತೆ ಬಿಜೆಪಿ (BJP) ಹೈಕಮಾಂಡ್‌ ಸೂಚಿಸಿರುವ ಹಿನ್ನೆಲೆಯಲ್ಲಿ ಶೆಟ್ಟರ್ ಅವರು ಈ ನಿರ್ಧಾರ ಮಾಡಿದ್ದಾರೆ.

ಹುಬ್ಬಳ್ಳಿಯ ಕೇಶ್ವಾಪುರದ ಮಧುರಾ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ವರಿಷ್ಠರ ಜೊತೆ ರಾತ್ರಿ ನಡೆಸಿದ ಮಾತುಕತೆ ವಿಫಲವಾದ ನಂತರ ಸುದ್ದಿಗೋಷ್ಠಿಯಲ್ಲಿ ಈ ನಿರ್ಧಾರ ಪ್ರಕಟಿಸಿದ್ದಾರೆ.

ನಾಳೆ ಶಿರಸಿಗೆ ತೆರಳಿ ಸ್ಪೀಕರ್ ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವೆ. ಬಳಿಕ ನನ್ನ ಮುಂದಿನ ನಿಲುವು ಏನೆಂದು ಹೇಳುತ್ತೇನೆ” ಎಂದು ತಿಳಿಸಿದರು.