ವಿಜಯಪುರ,ಸೆಪ್ಟಂಬರ್,20,2025 (www.justkannada.in): ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅಣತಿಯಂತೆ ಜಾತಿಗಣತಿ ಸಮೀಕ್ಷೆಗೆ ರಾಜ್ಯ ಸರ್ಕಾರ ಮುಂದಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸೋನಿಯಾ ಗಾಂಧಿ ಅಣತಿಯಂತೆ ಜಾತಿಗಣತಿ ಸಮೀಕ್ಷೆ ನಡೆಯುತ್ತಿದೆ. ಸೋನಿಯಾ ಗಾಂಧಿ ಸೂಚನೆಯಂತೆ ಹೊಸ ಸಮೀಕ್ಷೆ ನಡೆಸಲು ಮುಂದಾಗಿದ್ದಾರೆ. ಸಿಎಂ ಸಿದ್ದರಾಂಯ್ಯ ಕೀಳು ಮಟ್ಟದ ವ್ಯವಸ್ಥೆ ಮಾಡಿದ್ದಾರೆ ಎಂದು ಕಿಡಿಕಾರಿದರು.
ಕ್ರಿಶ್ಚಿಯನ್ ಕುರುಬ ಕ್ರಿಶ್ಚಿಯನ್ ಲಿಂಗಾಯತ ಕ್ರಿಶ್ಚಿಯನ್ ಒಕ್ಕಲಿಗೆ ಎಂದು ನಮೂದಿಸಲು ಮುಂದಾಗಿದ್ದಾರೆ. ಮುಸ್ಲೀಮರು ಹೆಚ್ಚಿದ್ದಾರೆ ಎಂದು ತೋರಿಸುವ ನಾಟಕವಿದು. ಜಾತಿಗಣತಿ ಮಾಡಲು ರಾಜ್ಯಕ್ಕೆ ಅಧಿಕಾರವಿಲ್ಲ. ಕೇಂದ್ರ ಸರ್ಕಾರಕ್ಕೆ ಮಾತ್ರ ಅಧಿಕಾರ ಇರೋದು ಎಂದು ಯತ್ನಾಳ್ ವಾಗ್ದಾಳಿ ನಡೆಸಿದರು.
Key words: Congress, Caste census, Sonia Gandhi, order , MLA, Yatnal