ಶಾಸಕ ಯತ್ನಾಳ್ ಹೇಳಿಕೆ ಗಂಭೀರವಾಗಿ ಪರಿಗಣಿಸಿ ಪ್ರಕರಣ ದಾಖಲಿಸಬೇಕು- ಡಿ.ಕೆ ಶಿವಕುಮಾರ್.

ಬೆಂಗಳೂರು,ಮೇ,6,2022(www.justkannada.in): ನಿಮ್ಮನ್ನ ಸಿಎಂ ಮಾಡ್ತೀವಿ 2500 ಕೋಟಿ ಕೊಡಿ ಎಂದು ದೆಹಲಿಯಿಂದ ಬಂದು ಕೇಳಿದ್ರು ಎಂಬ  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಬಗ್ಗೆ ಚರ್ಚೆಯಾಗುತ್ತಿದ್ದು ಈ ಮಧ್ಯೆ ಈ ಹೇಳಿಕೆಯನ್ನ ಗಂಭೀರವಾಗಿ ಪರಿಗಣಿಸಿ ಪ್ರಕರಣ ದಾಖಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.

ಈ ಕುರಿತು  ಮಾತನಾಡಿದ ಡಿ.ಕೆ. ಶಿವಕುಮಾರ್, ಸಿಎಂ ಆಗಲು 2,500 ಕೋಟಿ ರೂಪಾಯಿ ಕೊಡಬೇಕು ಎಂದು ಬಿಜೆಪಿ ಶಾಸಕರೇ ಹೇಳುತ್ತಿದ್ದಾರೆ. ಯತ್ನಾಳ್ ಹೇಳಿಕೆಯನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಈ ಬಗ್ಗೆ ಕೇಸ್ ದಾಖಲಾಗಬೇಕು ಎಂದರು.

ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧವೂ ಕಿಡಿಕಾರಿದ ಡಿ.ಕೆ. ಶಿವಕುಮಾರ್, ಬಿಜೆಪಿ ಸರ್ಕಾರ ಕೋವಿಡ್ ಸಾವಿನ ಸಂಖ್ಯೆಯಲ್ಲಿ ಸುಳ್ಳು ಲೆಕ್ಕ ತೋರಿಸಿದ್ದಾರೆ. ಕೋವಿಡ್ ಗೆ 4.8 ಲಕ್ಷ ಜನರು ಸಾವನ್ನಪ್ಪಿದ್ದಾರೆ ಎಂದು ಸುಳ್ಳು ಕಥೆ ಕಟ್ಟಿದರು. ಆದರೆ ಭಾರತದಲ್ಲಿಯೇ 47 ಲಕ್ಷ ಜನರು ಸಾವನ್ನಪ್ಪಿದ್ದಾರೆ ಎಂದು ಡಬ್ಲ್ಯುಹೆಚ್ ಒ ವರದಿಯೇ ತಿಳಿಸಿದೆ. ಈಗಲಾದರೂ ಸತ್ಯವನ್ನು ಒಪ್ಪಿಕೊಳ್ಳಬೇಕು  ಎಂದು ಡಿ.ಕೆ ಶಿವಕುಮಾರ್ ಕಿಡಿಕಾರಿದರು.

Key words: MLA- Yatnal – statement -seriously – case- DK Sivakumar.