Thursday, September 10, 2026

BDA Apartments

Home Front Page ಯಾವುದೇ ಶಾಸಕರು ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡಬಾರದು- ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ

ಯಾವುದೇ ಶಾಸಕರು ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡಬಾರದು- ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ

ಬೆಂಗಳೂರು, ನವೆಂಬರ್,26,2024 (www.justkannada.in):  ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಸಿಗುತ್ತಿಲ್ಲ. ಹೀಗಾಗಿ ಯಾವುದಾದರೂ ಎರಡು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಕು ಎಂದು ಕಾಂಗ್ರೆಸ್ ಶಾಸಕ ಗವಿಯಪ್ಪ ಹೇಳಿಕೆಗೆ ಗರಂ ಆದ ಡಿಸಿಎಂ ಡಿಕೆ ಶಿವಕುಮಾರ್, ಯಾವುದೇ ಶಾಸಕರು, ಕಾರ್ಯಕರ್ತರು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಬಾರದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಕಾಂಗ್ರೆಸ್ಸಿನ ಯಾವ ಶಾಸಕರು ಕೂಡ ಗ್ಯಾರಂಟಿಯ ಬಗ್ಗೆ ಮಾತನಾಡಬಾರದು. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನಾವು ಗ್ಯಾರಂಟಿ ಘೋಷಣೆ ಮಾಡಿದ್ದೇವೆ ಮುಂದುವರಿಸುತ್ತೇವೆ ಎಂದರು.

ಯಾವುದೇ ಗ್ಯಾರಂಟಿ ನಿಲ್ಲಿಸುವುದಿಲ್ಲ. ಜನರಿಗೆ ನಾವು ಭರವಸೆ ಕೊಟ್ಟಿದ್ದೇವೆ.  ಯಾರು ಅರ್ಹರಲ್ಲವೋ ಅವರನ್ನು ಪತ್ತೆ ಮಾಡುತ್ತೇವೆ. ಬಿಪಿಎಲ್ ಕಾರ್ಡ್ ರೀತಿ ಪರಿಶೀಲನೆ ಮಾಡುತ್ತೇವೆ  ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Key words: MLAs, No talk, guarantee scheme, DCM, DK Shivakumar