Saturday, September 5, 2026

BDA Apartments

Home Front Page ಅತೃಪ್ತ ಶಾಸಕರ ರಾಜೀನಾಮೆ ವಿಚಾರ: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ರಿಯಾಕ್ಷನ್ ಏನು ಗೊತ್ತೆ..?

ಅತೃಪ್ತ ಶಾಸಕರ ರಾಜೀನಾಮೆ ವಿಚಾರ: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ರಿಯಾಕ್ಷನ್ ಏನು ಗೊತ್ತೆ..?

ಬೆಂಗಳೂರು,ಜು,6,2019(www.justkannada.in):  ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ದ ಅಸಮಾಧಾನಗೊಂಡು ತಮ್ಮ ಶಾಸಕ ಸ್ಥಾನಕ್ಕೆ 12 ಮಂದಿ ಅತೃಪ್ತ ಶಾಸಕರು ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ರಾಜೀನಾಮೆ ವಿಚಾರ ಸ್ಪೀಕರ್ ಅಂಗಳದಲ್ಲಿದೆ. ಈ ಬಗ್ಗೆ ಸೋಮವಾರ ಪ್ರತಿಕ್ರಿಯಿಸುತ್ತೇನೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಈ ಬಗ್ಗೆ ಇಂದು ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರು, ಶಾಸಕರ ರಾಜೀನಾಮೆ ವಿಚಾರ ನನಗೆ ಗೊತ್ತಿರಲಿಲ್ಲ. ನಮ್ಮ ನಾಯಕರ ಮೂಲಕ ತಿಳಿಯಿತು. ಈಗ ರಾಜೀನಾಮೆ ವಿಚಾರ ಸ್ಪೀಕರ್ ಅಂಗಳದಲ್ಲಿದೆ. ನಾನು ನಮ್ಮ ಶಾಸಕರೊಂದಿಗೆ ಚರ್ಚಿಸುತ್ತೇನೆ. ಸ್ಪೀಕರ್  ನಿರ್ಧಾರದ ಬಳಿಕ ನನ್ನ ಅಂತಿಮ ನಿರ್ಧಾರ ತಿಳಿಸುತ್ತೇನೆ ಎಂದರು.

ರಾಜೀನಾಮೆ ವಿಚಾರ ಕುರಿತು ಸೋಮವಾರ ಮಾತನಾಡುತ್ತೇನೆ. ಈಗ ಪಕ್ಷ ಸಂಘಟನೆ ಬಗ್ಗೆ ಜೆಡಿಎಸ್ ಮುಖಂಡರ ಜತೆ ಚರ್ಚಿಸುತ್ತಿದ್ದೇನೆ ಎಂದು ಹೆಚ್.ಡಿ ದೇವೇಗೌಡರು ತಿಳಿಸಿದರು.

ಜೆಡಿಎಸ್ ಶಾಸಕರಾದ ಹೆಚ್.ವಿಶ್ವನಾಥ್, ಗೋಪಾಲಯ್ಯ, ನಾರಾಯಣಗೌಡ, ಕಾಂಗ್ರೆಸ್ ಶಾಸಕರಾದ ರಾಮಲಿಂಗರೆಡ್ಡಿ, ರಮೇಶ್ ಜಾರಕಿಹೊಳಿ ಮಹೇಶ್ ಕುಮುಟಳ್ಳಿ, ಸೇರಿ 12 ಮಂದಿ ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

Key words: MLA’s –Resignation- Former Prime Minister-hd devegowda- Reaction