ಬಿಜೆಪಿ ತೊರೆದು ಜೆಡಿಎಸ್ ಸೇರಿದ ಆಯನೂರು ಮಂಜುನಾಥ್.

ಚಿತ್ರದುರ್ಗ,ಏಪ್ರಿಲ್,19,2023(www.justkannada.in): ಬಿಜೆಪಿಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಬಿಜೆಪಿಯಲ್ಲಿ ಬಂಡಾಯ ಹೆಚ್ಚಾಗಿದ್ದು ಟಿಕೆಟ್ ಸಿಗದಿದ್ದಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಈಗಾಗಲೇ ಕಾಂಗ್ರೆಸ್ ಸೇರಿದ್ದಾರೆ. ಇದೀಗ ಮತ್ತೊಂದು ಬಿಜೆಪಿ ವಿಕೆಟ್ ಪತನವಾಗಿದ್ದು ಎಂಎಲ್ ಸಿ ಆಯನೂರು ಮಂಜುನಾಥ್ ಇಂದು ಬಿಜೆಪಿ ತೊರೆದು ಜೆಡಿಎಸ್ ಸೇರಿದ್ದಾರೆ.

ಚಿತ್ರದುರ್ಗ ಜೆಡಿಎಸ್ ಕಚೇರಿಯಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಜೆಡಿಎಸ್ ಬಾವುಟ ಕೊಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ಇದೇ ವೇಳೆ ಬಿ ಫಾರಂ ನೀಡುವ ಮೂಲಕ ಶಿವಮೊಗ್ಗ ಕ್ಷೇತ್ರದಿಂದಲೇ ಕಣಕ್ಕಿಯಲು ಆಯನೂರು ಮಂಜುನಾಥ್ ಸಜ್ಜಾಗಿದ್ದಾರೆ. ನಾಳೆ ಜೆಡಿಎಸ್ ಅಭ್ಯ ರ್ಥಿಯಾಗಿ ಆಯನೂರು ಮಂಜುನಾಥ್ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗಿದೆ.

ಶಿವಮೊಗ್ಗದಲ್ಲಿಂದು ಬ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದ ಆಯನೂರು ಮಂಜುನಾಥ್, ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧಾರ ಮಾಡಿದ್ದೇನೆ. ಇಂದು ಮಧ್ಯಾಹ್ನ ಹುಬ್ಬಳ್ಳಿಗೆ ತೆರಳಿ ಸಭಾಪತಿಗಳನ್ನು ಭೇಟಿಯಾಗಿ ರಾಜೀನಾಮೆ ನೀಡುವೆ. ಅಲ್ಲದೇ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ. ನಾಳೆ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ. ಯಾವ ಪಕ್ಷದಿಂದ ಸ್ಪರ್ಧೆ ಎಂಬುದನ್ನು ಮಧ್ಯಾಹ್ನದ ಬಳಿಕ ತಿಳಿಸುವೆ ಎಂದು ಹೇಳಿದ್ದರು.

Key words: MLC -Ayanur Manjunath –left-BJP -joined -JDS