ದಲಿತ ಸ್ವಾಭಿಮಾನಕ್ಕೆ ಧಕ್ಕೆ ತರುವ ಕೆಲಸ ಮೋದಿ, ಅಮಿತ್ ಶಾ ಮಾಡುತ್ತಿದ್ದಾರೆ- ಬಿ.ಕೆ ಹರಿಪ್ರಸಾದ್

ಬೆಂಗಳೂರು,ಮೇ,22,2025 (www.justkannda.in):  ಗೃಹ ಸಚಿವ ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಮೇಲೆ ಇಡಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿ ಪ್ರಸಾದ್, ಇಡಿ ದಾಳಿ ರಾಜಕೀಯ, ದುರುದ್ದೇಶಪೂರಿತ ದಾಳಿ. ದಲಿತ ಸ್ವಾಭಿಮಾನಕ್ಕೆ ಧಕ್ಕೆ ತರುವ ಕೆಲಸ ಮೋದಿ, ಅಮಿತ್ ಶಾ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಕೆ ಹರಿಪ್ರಸಾದ್, ದಲಿತರ ಸ್ವಾಭೀಮಾನಕ್ಕೆ ಧಕ್ಕೆ ತರುವ ಕೆಲಸವನ್ನ ಕೇಂದ್ರ ಮಾಡುತ್ತಿದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕೆ.  ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಅಧಿಕಾರ ದುರ್ಬಳಕೆಯಾಗುತ್ತಿದೆ. ವಿಪಕ್ಷಗಳ ನಾಯಕರ ಮೇಲೆ ಇಡಿ ಐಟಿ ಸಿಬಿಐ ದಾಳಿ ನಡೆಸಿ ಧ್ವನಿ ಅಡಗಿಸಲು ಯತ್ನಿಸುತ್ತಿದ್ದಾರೆ.  ಕೇಂದ್ರ ಸರ್ಕಾರ ಇಡಿ ಸಿಬಿಐ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಪರಮೇಶ್ವರ್  ಪೂರ್ವಜರು ದುರ್ಬಲ ವರ್ಗದವರ ಶಿಕ್ಷಣಕ್ಕೆ ನೆರವು ನೀಡುತ್ತಿದ್ದರು.  ಶಿಕ್ಷಣ ಸಂಸ್ಥೆಗಳನ್ನ ತೆರೆದು ನೆರವು ನೀಡುತ್ತಿದ್ದಾರೆ.  ದುರ್ಬಲ ವರ್ಗದಲ್ಲಿ ಬೆಳೆದ ನಾಯಕರನ್ನ ಕುಗ್ಗಿಸುವ ಕೆಲಸ ಮಾಡಲಾಗುತ್ತಿದೆ. ದಲಿತ ಸ್ವಾಭಿಮಾನಕ್ಕೆ ಧಕ್ಕೆ ತರುವ ಕೆಲಸವನ್ನು ಪ್ರಧಾನಿ ಮೋದಿ, ಅಮಿತ್ ಶಾ ಮಾಡುತ್ತಿದ್ದಾರೆ ಎಂದು  ಬಿಕೆ ಹರಿಪ್ರಸಾದ್ ಹರಿಹಾಯ್ದರು.

Key words: ED, Raid, Minister, Parameshwar, MLC, BK Hariprasad