ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು ಇಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಉತ್ತರ ನೀಡಲಿದ್ದಾರೆ. ಈ ಮಧ್ಯೆ ಬಿಜೆಪಿ ಧರ್ಮಸ್ಥಳ ಚಲೋ ನಡೆಸಿದ್ದು ಅಪಪ್ರಚಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ದೂರುದಾರನನ್ನ ಮಂಪರುಪರೀಕ್ಷೆಗೆ ಒಳಪಡಿಸಬೇಕೆಂದು ಆಗ್ರಹಿಸಿದ್ದಾರೆ.

ದೂರುದಾರನ ಜೊತೆ ಸೇರಿ ಹಲವರು ಪಿತೂರು ನಡೆಸಿದ್ದಾರೆ. ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಸಲಾಗುತ್ತದೆ.   ಹೀಗಾಗಿ ಎಸ್ ಐಟಿ ತನಿಖೆ ಪಾರದರ್ಶಕವಾಗಿರಬೇಕು. ಅಪಪ್ರಚಾರ ಮಾಡುವವರ ವಿರುದ್ದ ಕ್ರಮ ಕೈಗೊಳ್ಳಬೇಕು  ತನಿಖೆಯಲ್ಲಿ ಬಿಜೆಪಿ ಹಸ್ತಕ್ಷೇಪ ಮಾಡಲ್ಲ. ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ ಎಂದು ಸಿಟಿ ರವಿ ಆಗ್ರಹಿಸಿದ್ದಾರೆ.

Key words: Dharmasthala case, complainant, SIT,  MLC,  CT Ravi