ಶಿಕ್ಷಕರ ಹಾಗೂ ಪದವಿಧರ ಕ್ಷೇತ್ರದ ಚುನಾವಣೆಯ ವೇಳಾಪಟ್ಟಿ ಪ್ರಕಟ: ವಿವರ ಇಲ್ಲಿದೆ.

ಬೆಂಗಳೂರು,ಮೇ,2,2024 (www.justkannada.in): ವಿಧಾನ ಪರಿಷತ್ ನ 6 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು ಜೂನ್ 3 ರಂದು ಮತದಾನ ನಡೆಯಲಿದೆ.

ಈಶಾನ್ಯ ಪದವೀಧರ ಕ್ಷೇತ್ರ,  ನೈಋತ್ಯ ಪದವೀಧರ ಕ್ಷೇತ್ರ,  ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ  ಕ್ಷೇತ್ರ, ನೈಋತ್ಯ ಶಿಕ್ಷಕರ  ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ  ಜೂನ್ 3ರಂದು ಚುನಾವಣೆ ನಡೆದು ಜೂನ್ 6 ರಂದು ಫಲಿತಾಂಶ ಪ್ರಕಟವಾಗಲಿದೆ. ಜೂನ್ 3 ರ ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ.

ಮೇ 9 ರಂದು ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು , ಮೇ 16ಕ್ಕೆ  ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ. ನಾಮಪತ್ರ ವಾಪಸ್ ಪಡೆಯಲು ಮೇ 20 ಕಡೆಯ ದಿನಾಂಕವಾಗಿದೆ.

Key words: MLC, Election, announced