ವಿಧಾನ ಪರಿಷತ್ ಚುನಾವಣೆ: ಅವಕಾಶ ನೀಡುವಂತೆ ಸಿಎಂ ಸಿದ್ದರಾಮಯ್ಯಗೆ ಹೆಚ್.ಎ ವೆಂಕಟೇಶ್ ಮನವಿ.

ಮೈಸೂರು,ಮೇ,25,2024 (www.justkannada.in): ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ತಮಗೂ  ಅವಕಾಶ ನೀಡುವಂತೆ ಕೋರಿ ಸಿಎಂ ಸಿದ್ದರಾಮಯ್ಯಗೆ ಕೆಪಿಸಿಸಿ ವಕ್ತಾರ ಎಚ್.ಎ ವೆಂಕಟೇಶ್ ಪತ್ರ ಬರೆದು ಮನವಿ ಮಾಡಿದ್ದಾರೆ.

ಈ ಸಂಬಂಧ ಇಂದು ಮೈಸೂರಿನ ನಿವಾಸಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನ ಹೆಚ್.ಎ ವೆಂಕಟೇಶ್  ಭೇಟಿಯಾಗಿ ತಮಗೂ ಕಾಂಗ್ರೆಸ್ ನಿಂದ ವಿಧಾನಪರಿಷತ್ ಚುನಾವಣಾ  ಟಿಕೆಟ್ ನೀಡುವಂತೆ ಪತ್ರದ ಮೂಲಕ ಮನವಿ ಮಾಡಿದರು. ಈ ವೇಳೆ ಸಚಿವ ಹೆಚ್.ಸಿ ಮಹದೇವಪ್ಪ ಉಪಸ್ಥಿತರಿದ್ದರು

ಕಾಂಗ್ರೆಸ್‌ ಪಕ್ಷದಲ್ಲಿ ವಿದ್ಯಾರ್ಥಿ ದೆಸೆಯಿಂದಲೂ ಗುರುತಿಸಿಕೊಂಡಿದ್ದೇನೆ. ವಿದ್ಯಾರ್ಥಿ ಕಾಂಗ್ರೆಸ್‌, ಯುವ ಕಾಂಗ್ರೆಸ್‌ ಹಾಗೂ ಪಕ್ಷದ ವಿವಿಧ ಹಂತದ ಪದಾಧಿಕಾರಿಯಾಗಿ ನಿಷ್ಠೆಯಿಂದ ಕಾರ್ಯನಿರ್ವಹಿಸಿದ್ದೇನೆ. ಪಕ್ಷವು ನನಗೆ ವಹಿಸಿದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸಿದ್ದೇನೆ. ಶಿಕ್ಷಣ ಕ್ಷೇತ್ರದಲ್ಲಿಯೂ ಮೈಸೂರು ವಿಶ್ವವಿದ್ಯಾನಿಲಯದಲ್ಲಿ 3 ಬಾರಿ ಸಿಂಡಿಕೇಟ್‌ ಚುನಾಯಿತ ಸದಸ್ಯನಾಗಿ ಕಾರ್ಯನಿರ್ವಹಿಸಿದ್ದೇನೆ.

ಕರ್ನಾಟಕ ಸರ್ಕಾರದ ಪ್ರತಿನಿಧಿಯಾಗಿಯೂ ಒಮ್ಮೆ ಕಾರ್ಯನಿರ್ವಹಿಸಿದ್ದೇನೆ. ಪ್ರಸ್ತುತ ಕೆ.ಪಿ.ಸಿ.ಸಿ. ವಕ್ತಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. 30 ವರ್ಷಗಳಿಂದ ಪಕ್ಷದಲ್ಲಿ ಕಾರ್ಯನಿರ್ವಹಿಸಿರುವ ಬಗ್ಗೆ ಸ್ವವಿವರ ಪತ್ರವನ್ನು ಲಗತ್ತಿಸಿರುತ್ತೇನೆ. ವಿಧಾನ ಪರಿಷತ್‌ ಸದಸ್ಯನಾಗಿ ಸೇವೆ ಸಲ್ಲಿಸುವುದಕ್ಕೆ ಅವಕಾಶ ಮಾಡಿಕೊಡಬೇಕೆಂದು ತಮ್ಮಲ್ಲಿ ವಿನಂತಿಸುತ್ತೇನೆ ಎಂದು ಪತ್ರದಲ್ಲಿ ಹೆಚ್.ಎ ವೆಂಕಟೇಶ್ ತಿಳಿಸಿದ್ದಾರೆ.

Key words: MLC, Election, HA Venkatesh, CM Siddaramaiah