ಬೆಂಗಳೂರು, ಅಕ್ಟೋಬರ್,19,2026 (www.justkannada.in): ಕರ್ನಾಟಕ ವಿಧಾನ ಪರಿಷತ್ತಿನ ಚುನಾವಣೆ ಹಿನ್ನೆಲೆಯಲ್ಲಿ ಅಕ್ಟೋಬರ್ 23ರಂದು ಮತದಾರರಿಗೆ ಒಂದು ದಿನದ ಸಾಂದರ್ಭಿಕ ರಜೆ ಘೋಷಣೆ ಮಾಡಲಾಗಿದೆ. 
ಅಕ್ಟೋಬರ್ 23 ರಂದು ವಿಧಾನ ಪರಿಷತ್ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅರ್ಹ ಮತದಾರರಿಗೆ ಅನುಕೂಲವಾಗುವಂತೆ ರಾಜ್ಯ ಸರ್ಕಾರ ಅ.23 ರ ಶುಕ್ರವಾರ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿದೆ. ಈ ಬಗ್ಗೆ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ. 
ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರ: ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ
ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರ: ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ
ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರ: ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ
ಬೆಂಗಳೂರು ಶಿಕ್ಷಕರ ಕ್ಷೇತ್ರ: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ
ಚುನಾವಣಾ ಆಯೋಗವು ನಿಗದಿಪಡಿಸಿರುವಂತೆ, ಈ ಕ್ಷೇತ್ರಗಳಲ್ಲಿ ಮತದಾನದ ಹಕ್ಕು ಹೊಂದಿರುವ ಅರ್ಹ ಪದವೀಧರರು ಹಾಗೂ ಶಿಕ್ಷಕ ಮತದಾರರು ಮತ ಚಲಾಯಿಸಲು ಈ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ.
Key words: MLC Elections, Oct 23, Special Casual Leave , Declared







