ಬೆಂಗಳೂರು,ಮಾರ್ಚ್,9,2026 (www.justkannada.in): ಮೈಸೂರಿನ ಕೆ.ಆರ್ ಆಸ್ಪತ್ರೆ ಮತ್ತು ಚಲುವಾಂಬ ಆಸ್ಪತ್ರೆಗೆ 100 ಐಸಿಯು ಬೆಡ್ ಗಳನ್ನ ಮಂಜೂರು ಮಾಡುವಂತೆ ಸರ್ಕಾರಕ್ಕೆ ವಿಧಾನಪರಿಷತ್ ಸದಸ್ಯ ಕೆ.ಶಿವಕುಮಾರ್ ಆಗ್ರಹಿಸಿದರು.
ಕೆಆರ್ ಆಸ್ಪತ್ರೆ, ಚಲುವಾಂಬ ಆಸ್ಪತ್ರೆಗೆ ಐಸಿಯು ಬೆಡ್ ಗಳು ಮತ್ತು ಮೂಲಭೂತ ಸೌಲಭ್ಯಗಳ ಕುರಿತು ಇಂದು ವಿಧಾನಪರಿಷತ್ ನಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಗೆ ಎಂಎಲ್ ಸಿ ಕೆ.ಶಿವಕುಮಾರ್ ಪ್ರಶ್ನಿಸಿದರು.
ಕೆ. ಆರ್ ಆಸ್ಪತ್ರೆಯಲ್ಲಿ ಖಾಲಿರುವ 117 ಪೋಸ್ಟ್ ಗಳನ್ನ ಯಾವಾಗ ತುಂಬುತ್ತಿದ್ದೀರಿ? ಎಂಬ ಕೆ.ಶಿವಕುಮಾರ್ ಪ್ರಶ್ನೆಗೆ ಉತ್ತರಿಸಿದ ಸಚಿವ ಶರಣಪ್ರಕಾಶ್ ಪಾಟೀಲ್, ಒಳ ಮೀಸಲಾತಿ ಗೊಂದಲ ಹಿನ್ನೆಲೆ ನೇಮಕಾತಿ ತಡೆ ಹಿಡಿಯಲಾಗಿತ್ತು ಸಚಿವ ಸಂಫುಟ ಸಭೆಯಲ್ಲಿ ನೇಮಕಾತಿಗಳಿಗೆ ನಿರ್ಧರಿಸಲಾಗಿದೆ. ಶೀಘ್ರದಲ್ಲೇ 117 ಪೋಸ್ಟ್ ಗಳನ್ನ ಭರ್ತಿ ಮಾಡುತ್ತೇವೆ ಎಂದು ತಿಳಿಸಿದರು.
ಕೆಆರ್ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಬೆಡ್ ಗಳ ಕೊರತೆ ಇದೆ ಎಂದು ಹೇಳಿದ್ದಾರೆ. ಕೆಆರ್ ಆಸ್ಪತ್ರೆಯಲ್ಲಿ ಎಷ್ಟು ಸಾಮರ್ಥವಿದೆಯೋ ಅಷ್ಟು ಐಸಿಯು ಬೆಡ್ ಗಳ ವ್ಯವಸ್ಥೆ ಮಾಡಿದ್ದೇವೆ. ರೋಗಿಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಬೇರೆ ಬೇರೆ ಕಡೆಗಳಲ್ಲೂ ಬೆಡ್ ಗಳ ವ್ಯವಸ್ಥೆ ಮಾಡಲಾಗಿದೆ. ಟ್ರಾಮಾ ಸೆಂಟರ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲೂ ಕೂಡ ಬೆಡ್ ವ್ಯವಸ್ಥೆ ಮಾಡಲಾಗಿದೆ ಎಂದು ಉತ್ತರಿಸಿದರು.
ಹಾಗೆಯೇ ಐಸಿಯು ಕೊಟ್ಟರೆ ಸಾಲದು ಸೌಲಭ್ಯಗಳನ್ನ ಕೊಡಬೇಕು. ಹಾಗೆಯೇ ಚಲುವಾಂಬ ಆಸ್ಪತ್ರೆಯಲ್ಲಿ ಒಂದೇ ಬೆಡ್ ನಲ್ಲಿ ಎರಡು ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಾಗಿ ಕೆ.ಆರ್ ಆಸ್ಪತ್ರೆ ಮತ್ತು ಚಲುವಾಂಬ ಆಸ್ಪತ್ರೆಗೆ 100 ಐಸಿಯು ಬೆಡ್ ಗಳನ್ನ ಮಂಜೂರು ಮಾಡಬೇಕು ಎಂದು ಕೆ.ಶಿವಕುಮಾರ್ ಮನವಿ ಮಾಡಿದರು.
ಸಚಿವ ಶರಣಪ್ರಕಾಶ್ ಪಾಟೀಲ್ ಉತ್ತರಿಸಿ, ಡಯಾಲಿಸಿಸ್ ಸೆಂಟರ್ ಗಳ ಬಗ್ಗೆ ಪ್ರಶ್ನಿಸಿದ್ದಾರೆ. ಮೈಸೂರಿನಲ್ಲಿ ಇನ್ಸ್ ಟಿಟ್ಯೂಟ್ ಆಫ್ ನೆಫ್ರಾಲಜಿ ಬ್ರಾಂಚ್ ಮಾಡಲಾಗುತ್ತಿದೆ . 100 ಐಸಿಯು ಬೆಡ್ ಗಳಿಗೆ ಮನವಿ ಮಾಡಿದ್ದಾರೆ ಅದನ್ನು ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
Key words: MLC, K. Shivakumar, 100 ICU beds, Mysore, KR Hospital







