ಬೆಂಗಳೂರು,ಜುಲೈ,22,2025 (www.justkannada.in): ರಾಜ್ಯದ ಎಲ್ಲ ಭಾಗಗಳಲ್ಲಿ ಸಣ್ಣ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ನೀಡಿರುವ ವಿಚಾರ ಕುರಿತು ಪ್ರತಿಕ್ರಿಯಿಸಿರುವ ವಿಧಾನಪರಿಷತ್ ಸದಸ್ಯ ಎನ್.ರವಿ ಕುಮಾರ್, ರಾಜ್ಯ ಸರ್ಕಾರದವರು ಬೀದಿ ಬದಿ ವ್ಯಾಪಾರಿಗಳಿಗೆ ನೋಟಿಸ್ ಕೊಟ್ಟು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಈ ಕುರಿತು ಮಾತನಾಡಿರುವ ಎನ್.ರವಿ ಕುಮಾರ್, ರಾಜ್ಯದಲ್ಲಿ ಯಾರಿಗೆ ತೆರಿಗೆ ಹಾಕಬೇಕೆಂಬ ಹುಡುಕಾಟ ನಡೆದಿದೆ. ಹೀಗಾಗಿ ಸರ್ಕಾರ ಬೀದಿ ಬದಿ ವ್ಯಾಪಾರಿಗಳಿಗೆ ನೋಟಿಸ್ ಕೊಟ್ಟು ಹಣ ವಸೂಲಿ ಮಾಡುತ್ತಿದ್ದಾರೆ. ಆದರೆ ಇದರಲ್ಲಿ ಕೇಂದ್ರ ಸರ್ಕಾರವೇ ತಪ್ಪು ಮಾಡಿದೆ ಎಂದು ಸಿಎಂ ಹೇಳುತ್ತಿದ್ದಾರೆ. ಅದು ರಾಜ್ಯದ ವಾಣಿಜ್ಯ ತೆರಿಗೆ ಇಲಾಖೆಗಳ ಅಧಿಕಾರಿಗಳಿಂದ ಆಗಿರುವ ತಪ್ಪು ಎಂದರು.
ಕೇಂದ್ರ ಸರ್ಕಾರಕ್ಕೆ ನೀವು ಪತ್ರ ಬರೆಯುವ ಅವಶ್ಯಕತೆ ಇಲ್ಲ. ವ್ಯಾಪಾರಿಗಳು ಮಾಡುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡುತ್ತೇವೆ. ರಾಜ್ಯ ಸರ್ಕಾರದಿಂದ ಆಗಿರುವ ತಪ್ಪುಗಳನ್ನು ಎಚ್ಚರಿಸುತ್ತೇವೆ. ಕೂಡಲೇ ಸಿಎಂ ಸಿದ್ದರಾಮಯ್ಯ ಸಣ್ಣ ವ್ಯಾಪಾರಿಗಳನ್ನು ಕರೆದು ಮಾತನಾಡಬೇಕು. ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
Key words: Notice, small traders, MLC, N. Ravikumar