ಲಕ್ಷ್ಮಣ್ ಸವದಿ ಬೆನ್ನಲ್ಲೆ ಮತ್ತೊಂದು ವಿಕೆಟ್ ಪತನ: ಬಿಜೆಪಿಗೆ ಆರ್.ಶಂಕರ್ ಗುಡ್ ಬೈ.

ಹಾವೇರಿ,ಏಪ್ರಿಲ್,12,2023(www.justkannada.in):  ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೆ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು ಟಿಕೆಟ್ ಕೈತಪ್ಪಿದ್ದಕ್ಕೆ ಬಿಜೆಪಿಗೆ ರಾಜೀನಾಮೆ ನೀಡಲು ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ನಿರ್ಧರಿಸಿದ್ದಾರೆ.

ಈ ಬೆನ್ನಲ್ಲೆ ಬಿಜೆಪಿ ಮತ್ತೊಂದು ವಿಕೆಟ್ ಪತನವಾಗಿದ್ದು ವಿಧಾನಪರಿಷತ್ ಬಿಜೆಪಿ ಸದಸ್ಯ ಆರ್.ಶಂಕರ್ ಸಹ ಗುಡ್ ಬೈ ಹೇಳಲು ನಿರ್ಧರಿಸಿದ್ದಾರೆ. ಹಾವೇರಿ ಜಿಲ್ಲೆ ರಾಣೇಬೆನ್ನೂರು  ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಆರ್.ಶಂಕರ್ ಬಿಜೆಪಿಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಈ ಕುರಿತು ಮಾತಾನಾಡಿದ ಆರ್. ಶಂಕರ್, ಬಿಜೆಪಿಗೆ ನಾನು ರಾಜೀನಾಮೆ ನೀಡುತ್ತೇನೆ. ಮಧ್ಯಾಹ್ನ 3 ಗಂಟೆಗೆ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡುವೆ. ಬಿಜೆಪಿ ಸರ್ಕಾರ ಬರಲು ನಾನೂ ಕಾರಣನಾಗಿದ್ದೆ. ಆದರೆ ಟಿಕೆಟ್ ಹಂಚಿಕೆ ವೇಳೆ ನನ್ನನ್ನ ಮರೆತುಬಿಟ್ಟರು.  ನನ್ನ ತಾಳ್ಮೆಯ ಕಟ್ಟೆ ಒಡೆದಿದೆ.  ಈ ಬಾರಿಯೂ ಪಕ್ಷೇತರನಾಗಿ ನಾನು ಸ್ಪರ್ಧಿಸುತ್ತೇನೆ ಎಂದಿದ್ದಾರೆ.

Key words: MLC- R. Shankar –good by-BJP