ದೆಹಲಿಯಲ್ಲಿ ನಾಳೆ ಪ್ರತಿಭಟನೆ: ರಾಜ್ಯದಿಂದ 10 ಸಾವಿರಕ್ಕೂ ಹೆಚ್ಚು ಜನರು ಭಾಗಿ- MLC ಸಲೀಂ ಅಹ್ಮದ್

ಹುಬ್ಬಳ್ಳಿ,ಡಿಸೆಂಬರ್,13,2025 (www.justkannada.in): ನಾಳೆ ದೆಹಲಿಯಲ್ಲಿ ಮತಗಳ್ಳತನದ ವಿರುದ್ದ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ರಾಜ್ಯದಿಂದ ಸುಮಾರು10 ಸಾವಿರಕ್ಕೂ ಹೆಚ್ಚು ಜನರು ಭಾಗಿಯಾಗಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಎಂಎಲ್ ಸಿ ಸಲೀಂ ಅಹ್ಮದ್, ನಾಳಿನ ಬೃಹತ್  ಪ್ರತಿಭಟನೆಯಲ್ಲಿ ಸಚಿವರು, ಶಾಸಕರು ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ ಎಂದರು.

ಕಾಂಗ್ರೆಸ್ ಡಿನ್ನರ್ ಪಾರ್ಟಿ ಬಗ್ಗೆ ಬಿಜೆಪಿ ಟೀಕೆ ಕುರಿತು ಪ್ರತಿಕ್ರಿಯಿಸಿದ ಸಲೀಂ ಅಹ್ಮದ್, ಲಂಚ್  ಆಗುತ್ತೆ ಡಿನ್ನರ್ ಆಗುತ್ತೆ ಬ್ರೇಕ್ ಫಾಸ್ಟ್ ಆಗುತ್ತೆ. ಈ ಬಗ್ಗೆ ಬಿಜೆಪಿಯವರು ಸದನದಲ್ಲಿ ಚರ್ಚೆ ಮಾಡಲಿ . ಅದನ್ನು ಬಿಟ್ಟು ಕಾಂಗ್ರೆಸ್ ನವರು ಇಡ್ಲಿ ತಿಂದರಾ ನಾವು ಏನು ತಿಂದೆವು ಅಂತಾ ಬಿಜೆಪಿಯವರಿಗೆ ಏಕೆ ಬೇಕು?  ನಾವೆಲ್ಲರೂ ಒಟ್ಟಾಗಿ ಇದ್ದೇವೆ ಎಂದರು.

ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಸಿಎಂ ಮತ್ತು ಡಿಸಿಎಂ ಹೇಳಿದ್ದಾರೆ . ಈ ಬಗ್ಗೆ ಹೇಳಿಕೆ ನೀಡುವ ನಾಯಕರ ಬಗ್ಗೆ ವರಿಷ್ಠರು ಗಮನಿಸುತ್ತಿದ್ದಾರೆ ಎಂದು ಸಲೀಂ ಅಹ್ಮದ್ ಹೇಳಿದರು.

Key words: Protest, Delhi, tomorrow,  MLC, Salim Ahmed