ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ: ಅವರ ನಡೆ ಸಂವಿಧಾನ ಬಾಹಿರ: MLC ಸಲೀಂ ಅಹ್ಮದ್

ಹುಬ್ಬಳ್ಳಿ,ಜನವರಿ,24,2026 (www.justkannada.in):  ‘ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ನಡೆದುಕೊಂಡ ರೀತಿ ಸಂವಿಧಾನ ಬಾಹಿರ. ಅವರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಕಿಡಿ ಕಾರಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಎಂಎಲ್ ಸಿ ಸಲೀಂ ಅಹ್ಮದ್ , ‘ರಾಜ್ಯಪಾಲರ ನಡೆಯಿಂದ ರಾಜ್ಯದ ಜನರಿಗೆ ಅನ್ಯಾಯವಾಗಿದೆ. ಇಲ್ಲಿ ಭಾವನೆಗಳಿಗೆ ಅವಕಾಶವಿಲ್ಲ, ಕರ್ತವ್ಯ ಮಾತ್ರ ನಿಭಾಯಿಸಬೇಕು. ಈಗಾಗಲೇ ನಮ್ಮ ಸರ್ಕಾರ ಅವರ ನಡೆ ಖಂಡಿಸಿದ್ದು, ಸಿಎಂ ಸಿದ್ದರಾಮಯ್ಯ ಅವರು ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿದ್ದಾರೆ. ಇಂತಹ ಘಟನೆ ರಾಜ್ಯದಲ್ಲಿ ಹಿಂದೆಂದೂ ನಡೆದಿಲ್ಲ’ ಎಂದರು.

ವಿಧಾನಸಭೆ, ವಿಧಾನಪರಿಷತ್‌ ನ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸರ್ಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಭಾಷಣ ಮಾಡುವುದು ಸಂಪ್ರದಾಯ. ಆದರೆ, ರಾಜ್ಯಪಾಲರು ಅದನ್ನ ಬಿಟ್ಟು ಉಳಿದ ಕೆಲಸ ಮಾಡಿದ್ದಾರೆ’ ಎಂದು ಸಲೀಂ ಅಹ್ಮದ್ ವಾಗ್ದಾಳಿ ನಡೆಸಿದರು.

Key words: Governor, puppet, central government, Salim Ahmed