ದ್ವಿತೀಯ ಪಿಯು ಫಲಿತಾಂಶ: ಸರ್ಕಾರಿ ವಸತಿ ಶಾಲೆಗಳಲ್ಲಿ ಶೇ.97.22 ಮಕ್ಕಳು ತೇರ್ಗಡೆ: ಸಚಿವ ಮಹದೇವಪ್ಪ

ಬೆಂಗಳೂರು,ಏಪ್ರಿಲ್,10,2026 (www.justkannada.in): ನಿನ್ನೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಈ ನಡುವೆ ಸರ್ಕಾರಿ ವಸತಿ ಶಾಲೆಗಳಲ್ಲಿ ಶೇ 97.22 ಮಕ್ಕಳು ತೇರ್ಗಡೆಯಾಗಿದ್ದಾರೆ. ಈ ಬಾರಿ ಹೆಚ್ಚಿನ ಫಲಿತಾಂಶ ಬಂದಿದೆ ಎಂದು ಸಮಾಜಕಲ್ಯಾಣ ಸಚಿವ ಹೆಚ್ ಸಿ ಮಹದೇವಪ್ಪ ತಿಳಿಸಿದರು.

ಈ ಕುರಿತು ಇಂದು ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ, ರಾಜ್ಯದಲ್ಲಿ 539 ಎಸ್​ಸಿ, 156 ಎಸ್​ಟಿ ಮತ್ತು 179 ಹಿಂದುಳಿದ ವರ್ಗಗಳ ವಸತಿ ಶಾಲೆಗಳಿವೆ. ಹಳ್ಳಿ ಮಕ್ಕಳು ಹೆಚ್ಚು ಪಾಸಾಗಿದ್ದಾರೆ, ಅದರಲ್ಲೂ ಹೆಣ್ಣು ಮಕ್ಕಳು ಹೆಚ್ಚು ಪಾಸಾಗಿದ್ದಾರೆ. ಇದು ಬಹಳ ಸಂತೋಷ ಎಂದು ತಿಳಿಸಿದರು.

ವಸತಿ ಶಾಲೆಗಳಲ್ಲಿ ಓದಿದ 2,321 ಮಕ್ಕಳು ಡಿಸ್ಟಿಂಕ್ಷನ್​, 2487 ವಿದ್ಯಾರ್ಥಿಗಳು ಫಸ್ಟ್​​ ಕ್ಲಾಸ್​​ ನಲ್ಲಿ ಪಾಸ್​ ಆಗಿದ್ದಾರೆ. 72 ವಸತಿ ಕಾಲೇಜುಗಳಲ್ಲಿ ಜೆಇಇ, ಎನ್ ಇಇಟಿ, ಕೆಸಿಇಟಿ ಪ್ರವೇಶ ಪರೀಕ್ಷೆಗೆ ತರಬೇತಿ ನೀಡುವ ವ್ಯವಸ್ಥೆ ಮಾಡುತ್ತೇವೆ ಎಂದು ಸಮಾಜಕಲ್ಯಾಣ ಸಚಿವ ಹೆಚ್​​ಸಿ ಮಹದೇವಪ್ಪ ಮಾಹಿತಿ ನೀಡಿದ್ದಾರೆ.

Key words: Second PU results, government residential schools, Minister,  Mahadevappa