ಮೊಬೈಲ್ ಕ್ಯಾಂಟಿನ್ ಗೆ ಸಹಾಯಧನ: ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂಗಳೂರು ಗ್ರಾಮಾಂತರ, ಮಾರ್ಚ್,16,2026 (www.justkannada.in): ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಮೊಬೈಲ್ ಕ್ಯಾಂಟಿನ್ ನಡೆಸಲು ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಮಾರ್ಚ್ 30 ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು Enterprenuership (EP) ವಿಷಯದ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡುವುದು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟಿನ್ ನಡೆಸಲು ಸಹಾಯಧನ ನೀಡಲಾಗುತ್ತದೆ. ತರಬೇತಿಯನ್ನು ವಸತಿ ಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಕಾರ್ಯಕ್ರಮವನ್ನು ಜಾರಿಗೊಳಿಸಲು ಸಹ ಉದ್ದೇಶಿಸಲಾಗಿದೆ.

ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಯನ್ನು ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ನಂ.09, ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಕಛೇರಿ ಸಮಯದಲ್ಲಿ ಮಾರ್ಚ್ 30 ರೊಳಗೆ ಅರ್ಜಿ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Mobile canteen, subsidy,  Application, deadline, extended