Saturday, November 7, 2026

Dasara Wishes

Just Kannada DasraWishes_JK DasraWishes JK
Happy Dasara
Home Front Page ಕಾಂಗ್ರೆಸ್ ನಿಂದ  ‘ಮಾಡಾಳ್ ಮಿಸ್ಸಿಂಗ್ ಪೋಸ್ಟರ್’ ಅಭಿಯಾನ.

ಕಾಂಗ್ರೆಸ್ ನಿಂದ  ‘ಮಾಡಾಳ್ ಮಿಸ್ಸಿಂಗ್ ಪೋಸ್ಟರ್’ ಅಭಿಯಾನ.

ಬೆಂಗಳೂರು,ಮಾರ್ಚ್,7,2023(www.justkannada.in):  ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ  ಪುತ್ರ ಮಾಡಾಳ್ ಪ್ರಶಾಂತ್ ಮನೆಯಲ್ಲಿ 8 ಕೋಟಿ ರೂ. ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಿಂದ ಮಾಡಾಳ್ ಮಿಸ್ಸಿಂಗ್ ಪೋಸ್ಟರ್’ ಅಭಿಯಾನ ನಡೆಯುತ್ತಿದೆ.

ಪ್ರಕರಣದ ಎ1 ಆರೋಪಿ  ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕಳೆದ 6 ದಿನಗಳಿಂದ ನಾಪತ್ತೆಯಾಗಿದ್ದು, ಇವರ ಹುಡುಕಾಟಕ್ಕೆ ಲೋಕಾಯುಕ್ತ ಮೂರು ವಿಶೇಷ ತಂಡಗಳನ್ನು ರಚಿಸಿದೆ. ಈ ಮಧ್ಯೆ ಬೆಂಗಳೂರು ಮತ್ತು  ದಾವಣಗೆರೆಯಲ್ಲಿ ಕಾಂಗ್ರೆಸ್ ಯೂತ್ ಕಾಂಗ್ರೆಸ್ ಪೋಸ್ಟರ್​​​ ಅಭಿಯಾನ‌ ನಡೆಸುತ್ತಿದ್ದು, ಮಾಡಾಳ್ ಮಿಸ್ಸಿಂಗ್ ಪೋಸ್ಟರ್ ಅಂಟಿಸುತ್ತಿದ್ದಾರೆ.

ಲೋಕಾಯುಕ್ತ ಪ್ರಕರಣದಲ್ಲಿ A1 ಆರೋಪಿಯಾಗಿರುವ ಶಾಸಕ‌ ಮಾಡಾಳ್ ವಿರೂಪಾಕ್ಷಪ್ಪ 6ನೇ ದಿನವಾದರೂ ಪತ್ತೆ ಇಲ್ಲ. ಅವರನ್ನು ಹುಡುಕಿಕೊಡಿ ಎಂದು ದಾವಣಗೆರೆಯಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ಕೊಂಡಜ್ಜಿ ನೇತೃತ್ವದಲ್ಲಿ ಅಭಿಯಾನ ನಡೆಸಲಾಯಿತು. ನಗರದ ಪ್ರಮುಖ ಬೀದಿಗಳಲ್ಲಿ ಮಿಸ್ಸಿಂಗ್ ಪೋಸ್ಟರ್ ಅಂಟಿಸಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಾಣೆಯಾದವರ ಪಟ್ಟಿ ಮಾದರಿಯಲ್ಲಿ ಪೋಸ್ಟರ್ ಅಂಟಿಸಿದ ಕಾಂಗ್ರೆಸ್, ಕೊನೆ ಬಾರಿ ಕಾಣಿಸಿಕೊಂಡಿದ್ದು ಸಿಎಂ ಕಚೇರಿಯಲ್ಲಿ. ಪತ್ತೆಯಾದರೆ ಪೊಲೀಸ್​ ಹೆಲ್ಪ್​ಲೈನ್​ಗೆ ಕರೆ ಮಾಡುವಂತೆ ಪೋಸ್ಟರ್ ​ನಲ್ಲಿ ಬರೆಯಲಾಗಿದೆ.

Key words: ‘Modal –Missing-Poster- campaign – Congress.