ಕೊಚ್ಚಿಯಲ್ಲಿ ಚಲಿಸುವ ಕಾರಿನೊಳಗೆ ಮಾಡೆಲ್ ಮೇಲೆ ಅತ್ಯಾಚಾರ

ಬೆಂಗಳೂರು, ನವೆಂಬರ್ 20, 2022 (www.justkannada.in): ಕೊಚ್ಚಿಯಲ್ಲಿ ಚಲಿಸುವ ಕಾರಿನೊಳಗೆ 19 ವರ್ಷದ ಮಾಡೆಲ್ ಮೇಲೆ ಅತ್ಯಾಚಾರ ಎಸಗಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರ್ನಾಕುಲಂ ದಕ್ಷಿಣ ಪೊಲೀಸರು ಮಹಿಳೆ ಸೇರಿದಂತೆ ನಾಲ್ವರನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

ಕೇರಳದ ಕೊಚ್ಚಿಯ ಬಾರ್‌ನಲ್ಲಿ ನಡೆದ ಡಿಜೆ ಪಾರ್ಟಿಯಲ್ಲಿ ಭಾಗಿಯಾಗಿದ್ದ 19 ವರ್ಷದ ಮಾಡೆಲ್‌ಗೆ ಮಾದಕ ದ್ರವ್ಯ ನೀಡಿ ಮೂವರು ಪುರುಷರು ಕಾರಿನಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಸಂತ್ರಸ್ತೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಇನ್ಫೋಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ನಂತರ ಪ್ರಕರಣವನ್ನು ಎರ್ನಾಕುಲಂ ಸೌತ್ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ದಕ್ಷಿಣ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಯುತ್ತಿದೆ. ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಧಿತ ಮಹಿಳೆ ರಾಜಸ್ಥಾನ ಮೂಲದವರು ಎನ್ನಲಾಗಿದೆ.