ತಗ್ಗಿದ ಮುಂಗಾರು ರಾಜ್ಯದ ವಿವಿಧೆಡೆ ಸಾಧಾರಣ ಮಳೆ ಸಾಧ್ಯತೆ

ಬೆಂಗಳೂರು, ಆಗಸ್ಟ್ 10, 2021 (www.justkannada.in): ರಾಜ್ಯಾದ್ಯಂತ ಮುಂಗಾರು ತಗ್ಗಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ, ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಬೆಂಗಳೂರಿನ ಎಚ್‌ಎಎಲ್‌ನಲ್ಲಿ 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಬೆಂಗಳೂರು ನಗರದಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ENGLISH SUMMARY…

Monsoon declines: Normal rainfall in a few districts
Bengaluru, August 10, 2021 (www.justkannada.in): The monsoon has declined and possibilities of light rainfall at various places across the state are predicted.
The Meteorological Department has informed that there may be normal rainfall in coastal areas and inland areas.
The districts which may witness rainfall include Uttar Kannada, Dakshin Kannada, Udupi, Ballari, Bengaluru Rural, Bengaluru Urban, Chamarajanagara, Chikkaballapura, Chikkamagaluru, Chitradurga, Davanagere, Hassan, Kodagu, Kolar, Mandya, Mysuru, Ramanagara, Shivamogga, and Tumakuru.
Keywords: Meterological Department/ rainfall/ coastal areas/ Karnataka