Saturday, September 5, 2026

BDA Apartments

Home Front Page ಜೆಡಿಎಸ್ ಅನ್ನು ಕಾಂಗ್ರೆಸ್ ಹೊರಗಿಟ್ಟಾಗ ನಮ್ಮನ್ನ ಸ್ವಾಗತಿಸಿದ್ದು ಮೋದಿ, ಅಮಿತ್ ಶಾ- ಮಾಜಿ ಪ್ರಧಾನಿ ಹೆಚ್.ಡಿ...

ಜೆಡಿಎಸ್ ಅನ್ನು ಕಾಂಗ್ರೆಸ್ ಹೊರಗಿಟ್ಟಾಗ ನಮ್ಮನ್ನ ಸ್ವಾಗತಿಸಿದ್ದು ಮೋದಿ, ಅಮಿತ್ ಶಾ- ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು.

ಹಾಸನ, ಡಿಸೆಂಬರ್,4,2023(www.justkannada.in):  ಕಾಂಗ್ರೆಸ್ ನಮ್ಮನ್ನು ಹೊರಗಿಟ್ಟಾಗ ನಮ್ಮನ್ನ ಸ್ವಾಗತ ಮಾಡಿದ್ದು ಪ್ರಧಾನಿ ಮೋದಿ, ಅಮಿತ್ ಶಾ ಅವರು ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ನುಡಿದರು.

ಕಾಂಗ್ರೆಸ್ ಜೊತೆಗಿನ ಸಂಬಂಧ ಕಡಿದುಕೊಂಡಿದ್ದರ ಬಗ್ಗೆ  ಮಾತನಾಡಿದ ಹೆಚ್.ಡಿ ದೇವೇಗೌಡರು,  ನಮ್ಮ ಪಕ್ಷ ಜಾತ್ಯತೀತ ಜನತಾದಳ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆದಾಗ ರಾಷ್ಟ್ರದ ಎಲ್ಲಾ ಜಾತ್ಯಾತೀತ ಪಕ್ಷಗಳ ಮುಖಂಡರು ಬಂದಿದ್ದರು. ಆದರೆ ನಮ್ಮನ್ನ ಹೊರಗೆ ಇಡಲೇಬೇಕೆಂದು ತೀರ್ಮಾನ ಮಾಡಿದ್ದು ಯಾರು? ಕುಮಾರಸ್ವಾಮಿ ಸರ್ಕಾರ ತೆಗೆದವರು ಯಾರು? ಯಾರು ನಮ್ಮನ್ನು ಹೊರಗಿಡಬೇಕೆಂದು ಪ್ರಯತ್ನ ಮಾಡಿದರೋ ಅವರೇ ಸರ್ಕಾರ ಕೆಡವಿದರು. ನಮ್ಮನ್ನು ಹೊರಗೆ ದೂಡಿದ್ದು ಕಾಂಗ್ರೆಸ್ ಎಂದು ವಾಗ್ದಾಳಿ ನಡೆಸಿದರು.

ಜೆಡಿಎಸ್ ಬಗ್ಗೆ ಕಾಂಗ್ರೆಸ್ ಮುಖಂಡರು ಲಘುವಾಗಿ ಮಾತನಾಡಿದ್ದಾರೆ. ಮೋದಿಯವರು ಪ್ರಧಾನಿಯಾಗಿ ವೈಯಕ್ತಿಕವಾಗಿ ನನ್ನ ಬಗ್ಗೆ ಗೌರವ ಹೊಂದಿದ್ದಾರೆ. ಕಾಂಗ್ರೆಸ್ ನಡವಳಿಕೆಯನ್ನು ಗಮನಿಸಿದ ಮೋದಿ, ಶಾ ನಮ್ಮನ್ನ ಸ್ವಾಗತ ಮಾಡಿದ್ದಾರೆ. ಮುಂದಿನ ರಾಜಕೀಯ ಬೆಳವಣಿಗೆ ಹಾಗೂ ಕರ್ನಾಟಕದಲ್ಲಿ ನಾವು ಬಿಜೆಪಿ ಜೊತೆ ಕೈ ಜೋಡಿಸುತ್ತೇವೆ ಎಂದು ಹೆಚ್.ಡಿ ದೇವೇಗೌಡರು ತಿಳಿಸಿದರು.

Key words: Modi- Amit Shah – welcomed- former PM-HD Deve Gowda – Congress.