ನಾಳೆ ರಾಜ್ಯದಲ್ಲಿ ಮೋದಿ ಪ್ರಚಾರ: 28 ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸ- ಮಾಜಿ ಸಿಎಂ ಬಿಎಸ್ ವೈ.

ಬೆಂಗಳೂರು,ಏಪ್ರಿಲ್,13,2024 (www.justkannada.in):  ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ನಡೆಸಲಿದ್ದಾರೆ. ರಾಜ್ಯದಲ್ಲಿ 28 ಕ್ಷೇತ್ರಗಳನ್ನೂ ಗೆಲ್ಲುವ ವಿಶ್ವಾಸವಿದೆ ಎಂದು ಬಿಎಸ್ ಯಡಿಯೂರಪ್ಪ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿಎಸ್ ಯಡಿಯೂರಪ್ಪ, ನಾಳೆ ಮೋದಿ ರಾಜ್ಯದಲ್ಲಿ ಪ್ರಚಾರ ಮಾಡಲಿದ್ದಾರೆ.  ಮೋದಿಯವರ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ.  ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣವಿದೆ.  ನಾನು ಮೊಳಕಾಲ್ಮೂರು ಚಿತ್ರದುರ್ಗ ಚಳ್ಳೆಕೆರೆ ಪ್ರವಾಸ ಮಾಡುತ್ತೇನೆ. ರಾಜ್ಯದಲ್ಲಿ 28 ಕ್ಷೇತ್ರ ಗೆಲ್ಲುವ ವಿಶ್ವಾಸವಿದೆ. ಶಕ್ತಿ ಮೀರಿ ಪ್ರಯತ್ನಿಸುತ್ತೇನೆ ಎಂದು ಹೇಳಿದರು.

ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ಪ್ರಮುಖ ಆರೋಪಿಗಳನ್ನ ಬಂಧಿಸಿದ ಐಎನ್ ಎ ಅಧಿಕಾರಿಗಳಿಗೆ ಅಭಿನಂದನೆ.  ಆರೋಪಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಮತ್ತೆ ಇಂತಹ ಘಟನೆಗಳು ನಡೆಯದಂತೆ ಕ್ರಮಕೈಗೊಳ್ಳಬೇಕು ಎಂದು ಬಿಎಸ್ ವೈ ತಿಳಿಸಿದರು.

Key words: Modi-campaign-state-tomorrow- Former CM –BSY