ಗ್ಯಾರಂಟಿ ಯೋಜನೆ ಟೀಕಿಸಿದ್ದ ಮೋದಿಯವರೇ ಈಗ ಗ್ಯಾರಂಟಿ ಘೋಷಣೆ ಮಾಡಿದ್ದಾರೆ-ಸಿಎಂ ಸಿದ್ಧರಾಮಯ್ಯ ವಾಗ್ದಾಳಿ.

ಕೊಪ್ಪಳ,ನವೆಂಬರ್,20,2023(www.justkannada.in): ಗ್ಯಾರಂಟಿ ಯೋಜನೆ ಟೀಕಿಸಿದ್ದ ಮೋದಿಯವರೇ ಈಗ ಗ್ಯಾರಂಟಿ ಘೋಷಣೆ ಮಾಡಿದ್ದಾರೆ ಎಂದು ಸಿಎಂ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ನಮ್ಮ ಸರ್ಕಾರ  ಜಾರಿ ಮಾಡಿರುವ ಗ್ಯಾರಂಟಿ ಯೋಜನೆಯನ್ನು ಪ್ರಧಾನಿ ಮೋದಿ ವಿರೋಧಿಸಿದ್ದರು.  ಆದರೆ ಇದೀಗ ಪ್ರಧಾನಿ ಮೋದಿಯೇ ಗ್ಯಾರಂಟಿ ಘೋಷಣೆ ಮಾಡಿದ್ದಾರೆ . ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಗ್ಯಾರಂಟಿ ಜಾರಿ ಅಂತಿದ್ದಾರೆ.

ಬಿಜೆಪಿ ಯಾವತ್ತೂ ನುಡಿದಂತೆ ನಡೆಯಲ್ಲ. ಬಿಜೆಪಿಯವರು ಏನೇ ಹೇಳಿದರೂ ಕೂಡ ಜನರು ನಂಬುವುದಿಲ್ಲ ಎಂದು ಸಿಎಂ ಸಿದ್ಧರಾಮಯ್ಯ ಕಿಡಿಕಾರಿದರು.

Key words: Modi- criticized -guarantee scheme -announced – guarantee – CM Siddaramaiah