Monday, September 21, 2026

BDA Apartments

ಭಾರತ-ಚೀನಾ ಸಂಘರ್ಷ ಸಂಬಂಧ ರಾಷ್ಟ್ರಪತಿ ಜೊತೆ ಮಹತ್ವದ ಮಾತುಕತೆ ನಡೆಸಿದ ಪ್ರಧ...
Home Front Page  ಭಾರತ-ಚೀನಾ ಸಂಘರ್ಷ ಸಂಬಂಧ ರಾಷ್ಟ್ರಪತಿ ಜೊತೆ ಮಹತ್ವದ ಮಾತುಕತೆ ನಡೆಸಿದ ಪ್ರಧಾನಿ ಮೋದಿ

 ಭಾರತ-ಚೀನಾ ಸಂಘರ್ಷ ಸಂಬಂಧ ರಾಷ್ಟ್ರಪತಿ ಜೊತೆ ಮಹತ್ವದ ಮಾತುಕತೆ ನಡೆಸಿದ ಪ್ರಧಾನಿ ಮೋದಿ

ನವದೆಹಲಿ, ಜುಲೈ 05, 2020 (www.justkannada.in): ಭಾರತ-ಚೀನಾ ಸಂಘರ್ಷ ಸಂಬಂಧ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ಮೋದಿ ಮಹತ್ವದ ಚರ್ಚೆ ನಡೆಸಿದ್ದಾರೆ.

ಲಡಾಖ್ ಗೆ ಭೇಟಿ ನೀಡಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಿದ್ದರು. ಭೇಟಿಯ ಸಂದರ್ಭದಲ್ಲಿ ಭಾರತ-ಚೀನಾ ಗಡಿ ಸಂಘರ್ಷದ ಕುರಿತು ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಲಾಡಖ್ ಗೆ ಭೇಟಿ ನೀಡಿ ಗಡಿ ಪಡೆಯ ಸೇನಾಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದರು. ಇದೀಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.