Wednesday, September 2, 2026

BDA Apartments

Home Front Page ಇಂದು ಮೋದಿ ನೇತೃತ್ವದಲ್ಲಿ ರಾಷ್ಟ್ರೀಯ ಬಿಜೆಪಿ ಕಾರ್ಯಕಾರಿಣಿ ಸಭೆ

ಇಂದು ಮೋದಿ ನೇತೃತ್ವದಲ್ಲಿ ರಾಷ್ಟ್ರೀಯ ಬಿಜೆಪಿ ಕಾರ್ಯಕಾರಿಣಿ ಸಭೆ

ಬೆಂಗಳೂರು, ನವೆಂಬರ್ 07, 2021 (www.justkannada.in): ಇಂದು ರಾಷ್ಟ್ರೀಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದೆ.

ಪಕ್ಷದ ಬಲವರ್ಧನೆ ಹಾಗೂ ಮುಂದಿನ ಕಾರ್ಯಯೋಜನೆ ಕುರಿತಾಗಿ ಚರ್ಚಿಸುವ ನಿಟ್ಟಿನಲ್ಲಿ ಇಂದು ಕಾರ್ಯಕಾರಿಣಿ ಸಭೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ರಾಷ್ಟ್ರೀಯ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ. ರಾಜ್ಯದಿಂದ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭಾಗಿಯಾಗಲಿದ್ದಾರೆ.

ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮುಂದಿನ ದಿನಗಳಲ್ಲಿ ರಾಷ್ಟ್ರ ಮಟ್ಟದಲ್ಲಿ ಪಕ್ಷ ಬಲವರ್ಧನೆ ಹಾಗೂ ಮುಂದಿನ ಕಾರ್ಯಯೋಜನೆಯ ಕುರಿತಾಗಿ ಚರ್ಚೆ ನಡೆಯಲಿದೆ.

ರಾಜ್ಯದಲ್ಲೂ ಮುಂದಿನ ಒಂದುವರೆ ವರ್ಷದಲ್ಲಿ ಚುನಾವಣಾ ಎದುರಾಗಲಿದ್ದು ಈ ನಿಟ್ಟಿನಲ್ಲಿ ಏನೆಲ್ಲಾ ಕಾರ್ಯತಂತ್ರಗಳನ್ನು ಕೈಗೊಳ್ಳಬೇಕು ಎಂಬ ನಿಟ್ಟಿನಲ್ಲಿ ಚರ್ಚೆ ಸಲಹೆ ಸೂಚನೆಗಳನ್ನು ನೀಡುವ ಸಾಧ್ಯತೆ ಇದೆ.