ಸೋಷಿಯಲ್ ಮೀಡಿಯಾದಲ್ಲಿ ಮೋದಿ ಶೇರ್ ಮಾಡಿದ ವೀಡಿಯೋ ವೈರಲ್

ನವದೆಹಲಿ, ಆಗಸ್ಟ್ 23, 2020 (www.justkannada.in): ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟ್ಟರ್ ನಲ್ಲಿ ಹಂಚಿಕೊಂಡ ವೀಡಿಯೋವೊಂದು ವೈರಲ್ ಆಗಿದೆ.

ಇಂದು ಮೋದಿ ತಮ್ಮ ನಿವಾಸದಲ್ಲಿ ನವಿಲುಗಳಿಗೆ ಆಹಾರ ಹಂಚಿದ್ದು, ಆ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಗಮನ ಸೆಳೆದಿದೆ.  ಆ ವಿಡಿಯೋ ವೈರಲ್ ಆಗಿದ್ದು ಅಪಾರ ಜನಮೆಚ್ಚುಗೆ ಪಡೆದಿದೆ. ಇಂದು ಬೆಳಗ್ಗೆ ಪ್ರಧಾನಿ ಮೋದಿಯವರ ವಾಡಿಕೆಯ ವ್ಯಾಯಾಮದ ಸಮಯದಲ್ಲಿ ಈ ವಿಡಿಯೋವನ್ನು ಚಿತ್ರಿಕರಿಸಲಾಗಿದೆ.

ಟ್ವಿಟ್ಟರ್, ಇನ್ ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋವನ್ನು ಪೋಸ್ಟ್ ಮಾಡಲಾಗಿದೆ. ಬೆಳಗ್ಗಿನ ಸಂದರ್ಭದಲ್ಲಿ ನವಿಲುಗಳು ಸಾಮಾನ್ಯವೆಂಬಂತೆ ಕಂಡುಬರುತ್ತದೆ. ಪ್ರಧಾನಿ ಮೋದಿ ನಿವಾಸದಲ್ಲಿ ಹಲವು ಪಕ್ಷಿಗಳಿಗೆ ಆಶ್ರಯ ಕಲ್ಪಿಸಲಾಗಿದೆ.