Saturday, September 12, 2026

BDA Apartments

18 ಗಂಟೆ ಕೆಲಸ ಮಾಡುವ ಮೋದಿಯವರಿಗೆ ಬರ ಪರಿಹಾರ ಒದಗಿಸಲು ಕನಿಷ್ಠ 18 ನಿಮಿಷ ಸಮಯವಿ...
Home Front Page 18 ಗಂಟೆ ಕೆಲಸ ಮಾಡುವ ಮೋದಿಯವರಿಗೆ  ಬರ ಪರಿಹಾರ ಒದಗಿಸಲು ಕನಿಷ್ಠ 18 ನಿಮಿಷ ಸಮಯವಿಲ್ಲವೆ..?...

18 ಗಂಟೆ ಕೆಲಸ ಮಾಡುವ ಮೋದಿಯವರಿಗೆ  ಬರ ಪರಿಹಾರ ಒದಗಿಸಲು ಕನಿಷ್ಠ 18 ನಿಮಿಷ ಸಮಯವಿಲ್ಲವೆ..? ರಾಜ್ಯ ಕಾಂಗ್ರೆಸ್ ಟೀಕೆ.

ಬೆಂಗಳೂರು,ಜನವರಿ,2,2024(www.justkannada.in):  ರಾಜ್ಯಕ್ಕೆ ಬರ ಪರಿಹಾರ ನೀಡದ ಕೇಂದ್ರ ಸರ್ಕಾರದ ವಿರುದ್ದ ರಾಜ್ಯ ಕಾಂಗ್ರೆಸ್ ಘಟಕ ಟ್ವೀಟ್ ಮಾಡಿ ಟೀಕಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಘಟಕ,  ಪತ್ರ ಬರೆದದ್ದಾಯ್ತು, ಪ್ರಧಾನಿ ಭೇಟಿಯಾಗಿ ಮನವಿ ಸಲ್ಲಿಸಿದ್ದಾಯ್ತು, ಕೇಂದ್ರ ಬರ ಅಧ್ಯಯನ ತಂಡ ಬಂದು ಹೋಗಿದ್ದಾಯ್ತು,

18 ಗಂಟೆ ಕೆಲಸ ಮಾಡುವ ಮೋದಿಯವರಿಗೆ ಕರ್ನಾಟಕದ ಬರ ಪರಿಸ್ಥಿತಿಯ ಬಗ್ಗೆ ಗಮನಿಸಿ ಪರಿಹಾರ ಒದಗಿಸಲು ಕನಿಷ್ಠ 18 ನಿಮಿಷ ಸಮಯವಿಲ್ಲವೇ ಬಿಜೆಪಿ..? ಎಂದು ಲೇವಡಿ ಮಾಡಿದೆ.18 ಗಂಟೆ ಕೆಲಸ ಮಾಡುವ ಮೋದಿಯವರಿಗೆ ಬರ ಪರಿಹಾರ ಒದಗಿಸಲು ಕನಿಷ್ಠ 18 ನಿಮಿಷ ಸಮಯವಿ...

ಬಿಜೆಪಿಯ 25 ಸಂಸದರು ಬರ ಪರಿಹಾರ ಬಿಡುಗಡೆ ಮಾಡುವಂತೆ ಇದುವರೆಗೂ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವ ಕೆಲಸ ಮಾಡಿಲ್ಲವೇಕೆ? ಬಿಜೆಪಿಗರಿಗೆ ಕನ್ನಡಿಗರ ಮತ ಮಾತ್ರ ಬೇಕು, ಕನ್ನಡಿಗರ ಹಿತ ಬೇಡವಾಗಿದೆ ಎಂದು ಬಿಜೆಪಿ ವಿರುದ್ದ ಕಾಂಗ್ರೆಸ್ ಕಿಡಿಕಾರಿದೆ.

Key words: Modi – works – 18 hours – drought -relief- Congress.