Monday, August 10, 2026

BDA Apartments

Home Front Page ಬಿಎಸ್ ವೈ ಆಪ್ತ ಮೋಹನ್ ಲಿಂಬಿಕಾಯಿ ಬಿಜೆಪಿಗೆ ಗುಡ್ ಬೈ: ಇಂದೇ ಕಾಂಗ್ರೆಸ್ ಸೇರ್ಪಡೆ.

ಬಿಎಸ್ ವೈ ಆಪ್ತ ಮೋಹನ್ ಲಿಂಬಿಕಾಯಿ ಬಿಜೆಪಿಗೆ ಗುಡ್ ಬೈ: ಇಂದೇ ಕಾಂಗ್ರೆಸ್ ಸೇರ್ಪಡೆ.

ಬೆಂಗಳೂರು,ಮಾರ್ಚ್,16,2023(www.juskannada.in):  ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ಮೋಹನ್ ಲಿಂಬಿಕಾಯಿ ಬಿಜೆಪಿಗೆ  ರಾಜೀನಾಮೆ ನೀಡಿದ್ದು ಇಂದೇ ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮೋಹನ್ ಲಿಂಬಿಕಾಯಿ ಇಂದು ಬೆಳಗ್ಗೆ ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಸಹಾಯಕರ ಮೂಲಕ ಮಲ್ಲೇಶ್ವರದಲ್ಲಿರುವ ಬಿಜೆಪಿ ರಾಜ್ಯ ಕಚೇರಿಗೆ ರಾಜೀನಾಮೆ ಪತ್ರ ತಲುಪಿಸಿದ ಲಿಂಬಿಕಾಯಿ, ಇಂದು ಸಂಜೆ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಬಿಜೆಪಿ ತ್ಯಜಿಸಿ ಕೆಜೆಪಿ ಕಟ್ಟಿದ ವೇಳೆ ಮೊದಲನೆಯದಾಗಿ ರಾಜೀನಾಮೆ ಸಲ್ಲಿಸಿದ್ದು ಮೋಹನ್ ಲಿಂಬಿಕಾಯಿ ಅವರಾಗಿದ್ದರು. ಅಂದು ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿ ಬಿಎಸ್​ವೈ ಹಿಂದೆ ಸಾಗಿದ್ದರು. ಹುಬ್ಬಳ್ಳಿ – ಧಾರವಾಡ ಪಶ್ಚಿಮ ಕ್ಷೇತ್ರದಿಂದ ಕೆಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಸೋತಿದ್ದರು.

Key words: Mohan Limbikai -Goodbye – BJP-Congress- joins- today.