ಮೋಕಾ ಚಂಡಮಾರುತ ಎಫೆಕ್ಟ್: ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ.

ಬೆಂಗಳೂರು,ಮೇ,11,2023(www.justkannada.in):  ಬಂಗಾಳಕೊಲ್ಲಿಯಲ್ಲಿ ಮೋಕಾ ಚಂಡಮಾರುತ ಎಫೆಕ್ಟ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯಾಗು  ಸಾಧ್ಯತೆ ಇದೆ ಎಂದು ರಾಜ್ಯ ಹವಮಾನ ಇಲಾಖೆ ಎಚ್ಚರಿಸಿದೆ.

ಮೋಕಾ ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿ ಇನ್ನೂ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.  ದಕ್ಷಿಣ ಒಳನಾಡು ಉತ್ತರ ಒಳನಾಡು ಕರಾವಳಿ ಭಾಗದಲ್ಲೂ ಮಳೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ದಕ್ಷಿಣ ಒಳನಾಡಿನ  ಮೈಸೂರು, ಕೊಡಗು, ಚಿಕ್ಕಮಗಳೂರು, ಹಾಸನ, ರಾಮನಗರ, ಚಾಮರಾಜನಗರ ತುಮಕೂರಿನಲ್ಲಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ.  ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಕರವಾವಳಿ ಭಾಗದ  ದಕ್ಷಣ ಕನ್ನಡ, ಉಡುಪಿಯಲ್ಲೂ  ಮಳೆಯಾಗಲಿದೆ.   ಮೇ 13 ರಂದು  ಬೆಂಗಳೂರಿನಲ್ಲಿ ಅತಿಹೆಚ್ಚು ಮಳೆಯಾಗುವ ಸಾಧ್ಯತೆ ಸಾಧ್ಯತೆ ಇದೆ.

Key words: Moka Cyclone- Effect-Rain – three more days.