ಮತ್ತೆ ಮುಂಗಾರು ಚುರುಕು: ಇಂದಿನಿಂದ ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

ಬೆಂಗಳೂರು, ಆಗಸ್ಟ್ 06, 2023 (www.justkannada.in): ಆಗಸ್ಟ್‌ ತಿಂಗಳ ಮೊದಲ ವಾರದಲ್ಲಿ ಕೊಂಚ ಮಳೆ ಕಡಿಮೆಯಾಗಿದ್ದು, ಇದೀಗ ಎರಡನೇ ವಾರ ಮತ್ತೇ ಬಿರುಸಾಗಿದೆ.

ನಿನ್ನೆ ರಾಜ್ಯದ ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗಿದ್ದು, ಇಂದುಕೂಡ ಇದೇ ರೀತಿಯ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ.

ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳು, ಮತ್ತೊಂದೆಡೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.

ಇದರ ಜತೆಗೆ ರಾಜ್ಯದ ಬಹುತೇಕ ಕಡೆ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕರಾವಳಿ ಜಿಲ್ಲೆಯ ಬಹುತೇಕ ಕಡೆ ಭಾರೀ ಮಳೆಯಿಂದ ಈಗಾಗಲೇ ಅಪಾರ ಹಾನಿಯಾಗಿದೆ. ಇದೀಗ ಮತ್ತೆ ಈ ಭಾಗದಲ್ಲಿ ಮಳೆರಾಯನ ಆರ್ಭಟ ನಿಧಾನವಾಗಿ ಹೆಚ್ಚಾಗುತ್ತಲೇ ಇದೆ.