Sunday, August 23, 2026

BDA Apartments

Home Front Page ಮುಂಗಾರು ಚುರುಕು: ಮುಂದಿನ 5 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ

ಮುಂಗಾರು ಚುರುಕು: ಮುಂದಿನ 5 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು, ಜೂನ್ 26, 2022 (www.justkannada.in): ಮುಂದಿನ 5 ದಿನಗಳ ಕಾಲ ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವೆಡೆ ಹೆಚ್ಚಿನ ಮಳೆಯಾಗಲಿದೆ.

ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಜೂ. 26 ರಿಂದ 30ರವರೆಗೆ ಕರಾವಳಿಯ ಉಡುಪಿ, ಉತ್ತರಕನ್ನಡ, ದಕ್ಷಿಣಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜೂನ್ 26, 27 ಮತ್ತು 30ರಂದು ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಕಲಬುರ್ಗಿ, ಹಾವೇರಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿಯೂ ಧಾರಾಕಾರ ಮಳೆಯಾಗಲಿದೆ. ವೇಗದ ಗಾಳಿ ಬೀಸುತ್ತಿರುವ ಕಾರಣ ಮತ್ತು ಕಡಲತೀರದಲ್ಲಿ ಸಮುದ್ರದ ಅಲೆಗಳ ಅಬ್ಬರ ಜೋರಾಗಿರುವುದರಿಂದ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.