ಬೆಂಗಳೂರು,ಅಕ್ಟೋಬರ್,27,2025 (www.justkannada.in): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮೊಂತಾ ಚಂಡಮಾರುತದ ಅಬ್ಬರ ತೀವ್ರಗೊಂಡಿದೆ. ಭಾರಿ ಗಾಳಿಯೊಂದಿಗೆ ಮೊಂಥಾ ಚಂಡಮಾರುತ ಆಂಧ್ರಪ್ರದೇಶದ ಕರಾವಳಿಯತ್ತ ಧಾವಿಸಿ ಬರುತ್ತಿದ್ದು ಆಂಧ್ರ ಪ್ರದೇಶ, ಕರ್ನಾಟಕ ಸೇರಿ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಮೊಂತಾ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಇಂದು, ನಾಳೆ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೊಂತಾ ಚಂಡಮಾರುತದ ಎಫೆಕ್ಟ್ ನಿಂದಾಗಿ ಎರಡು ದಿನಗಳ ಕಾಲ ಬಿರುಗಾಳಿ ಹಾಗೂ ಮಳೆಯ ಅಬ್ಬರ ಜೋರಾಗಲಿದೆ. ಈ ಹಿನ್ನೆಲೆಯಲ್ಲಿ ಆಂಧ್ರ ಕರಾವಳಿಯಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ. ಕಾಕಿನಾಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದಿನಿಂದ 5 ದಿನಗಳ ಕಾಲ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನಾಳೆ ಸಂಜೆ ಅಥವಾ ರಾತ್ರಿ ವೇಳೆಗೆ ಮೊಂತಾ ಚಂಡ ಮಾರುತ ಆಂಧ್ರ ಪ್ರದೇಶಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ. ಆಂಧ್ರ, ಕರ್ನಾಟಕ, ಕೇರಳ ಸೇರಿದಂತೆ ಹಲವು ರಾಜ್ಯಗಳಿಗೂ ಚಂಡಮಾರುತ ಪರಿಣಾಮ ಬೀರಲಿದ್ದು, ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ ನೀಡಲಾಗಿದೆ.
Key words: Montha cyclone, effect, Heavy rain, Andhra Pradesh, Karnataka







