ನಾಳಿನ ರೈತರ ಹೋರಾಟಕ್ಕೆ ಮೈಸೂರು ಹೋಟೆಲ್ ಮಾಲೀಕರ ಸಂಘದಿಂದ ನೈತಿಕ ಬೆಂಬಲ…

ಮೈಸೂರು,ಸೆಪ್ಟಂಬರ್,27,2020(www.justkannada.in):  ಎಪಿಎಂಸಿ ಮತ್ತು ಭೂ ಸುಧಾರಣಾ ಕಾಯ್ದೆ ತಿದ್ಧುಪಡಿ ವಿರೋಧಿಸಿ ನಾಳೆ ರೈತ ಸಂಘಟನೆಗಳು ಕರೆ ನೀಡಿರುವ ಬಂದ್ ಗೆ ಮೈಸೂರು ಹೋಟೆಕ್ ಮಾಲೀಕರ ಸಂಘ ನೈತಿಕ ಬೆಂಬಲ ನೀಡಿದೆ.jk-logo-justkannada-logo

ಈ ಬಗ್ಗೆ ಇಂದು ಮಾಧ್ಯಮಗಳ ಜತೆ ಮಾತನಾಡಿ ಮಾಹಿತಿ ನೀಡಿದ ಮೈಸೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ, ನಾಳಿನ ರೈತರ ಹೋರಾಟಕ್ಕೆ ನೈತಿಕ ಬೆಂಬಲ ನೀಡುತ್ತಿದ್ದೇವೆ. ಕರೋನಾದಿಂದ ಈಗಾಗಲೇ ಸಂಕಷ್ಟದಲ್ಲಿದ್ದೇವೆ. ನಾಳೆ ಹೋಟೆಲ್ ಬಾಗಿಲು ಮುಚ್ಚುವುದಿಲ್ಲ ಎಂದು ಸ್ಪಷ್ಟಪಡಿಸಿದರು.moral-support-mysore-hotel-owners-association-tomorrow-karnataka-bandh

ಇನ್ನು ವಿರೋಧ ಮಾಡುತ್ತಿರುವ ವಿಧೇಯಕಗಳು ವಿಧಾನಸಭೆಯಲ್ಲಿ ಅನುಮೋದನೆ ಆಗಿವೆ. ಈಗ ಪ್ರತಿಭಟನೆ ಮಾಡಿ ಪ್ರಯೋಜನ ಇಲ್ಲ. ಅಲ್ಲದೆ ಆಹಾರ ಅಗತ್ಯ ಸೇವೆಯ ಅಡಿಯಲ್ಲಿ ಬರುತ್ತೆ. ಆದ್ದರಿಂದ ನಾವು ನೈತಿಕ ಬೆಂಬಲ ನೀಡಿ ಉದ್ಯಮ ನಡೆಸುತ್ತೇವೆ ಎಂದು ನಾರಾಯಣಗೌಡ ತಿಳಿಸಿದರು.

Key words: Moral -support -Mysore Hotel Owners Association –tomorrow- Karnataka bandh