Friday, October 16, 2026

Dasara Wishes

Happy Dasara
Home Front Page ಕಾಂಗ್ರೆಸ್ ಟಿಕೆಟ್ ಗಾಗಿ 1120ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ.

ಕಾಂಗ್ರೆಸ್ ಟಿಕೆಟ್ ಗಾಗಿ 1120ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ.

ಬೆಂಗಳೂರು,ನವೆಂಬರ್,21,2022(www.justkannada.in):  ರಾಜ್ಯ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಆರಂಭಿಸಿರುವ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದ್ದು, ಅರ್ಜಿ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದೆ.

ಈ ಮಧ್ಯೆ ಕಾಂಗ್ರೆಸ್ ಟಿಕೆಟ್ ಗಾಗಿ ಆಕಾಂಕ್ಷಿಗಳ ಪಟ್ಟಿ ಹೆಚ್ಚುತ್ತಲೇ ಇದ್ದು ಈವರೆಗೆ ಕೆಪಿಸಿಸಿಗೆ ಸುಮಾರು 1120ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಟಿಕೆಟ್ ಗಾಗಿ ಅರ್ಜಿ ಸಲ್ಲಿಸಬಯಸುವವರು 2 ಲಕ್ಷ ಡಿಡಿ ಕಟ್ಟಬೇಕಾಗಿದೆ. ಎಸ್ಸಿ ಮತ್ತು ಎಸ್.ಟಿಗೆ 1 ಲಕ್ಷ ಡಿಡಿ ನಿಗದಿ ಮಾಡಲಾಗಿದೆ.ಕಾಂಗ್ರೆಸ್ ಟಿಕೆಟ್ ಗಾಗಿ 1120ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ congress

ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರೇ ಸ್ವತಃ ಅರ್ಜಿ ಸಲ್ಲಿಸಿದ್ದಾರೆ. ವಿಪಕ್ಷ ನಾಯಕ ಸಿದ್ಧರಾಮಯ್ಯ ಈವರೆಗೆ ಅರ್ಜಿ ಸಲ್ಲಿಕೆ ಮಾಡಿಲ್ಲ. ಸಂಜೆಯೊಳಗೆ ಅರ್ಜಿ ಸಲ್ಲಿಸಬಹುದು ಎನ್ನಲಾಗಿದೆ.

Key words: More than -1120 applications – Congress –ticket-election