ಕಾಂಗ್ರೆಸ್ ಟಿಕೆಟ್ ಗಾಗಿ 1120ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ.

ಬೆಂಗಳೂರು,ನವೆಂಬರ್,21,2022(www.justkannada.in):  ರಾಜ್ಯ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಆರಂಭಿಸಿರುವ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದ್ದು, ಅರ್ಜಿ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದೆ.

ಈ ಮಧ್ಯೆ ಕಾಂಗ್ರೆಸ್ ಟಿಕೆಟ್ ಗಾಗಿ ಆಕಾಂಕ್ಷಿಗಳ ಪಟ್ಟಿ ಹೆಚ್ಚುತ್ತಲೇ ಇದ್ದು ಈವರೆಗೆ ಕೆಪಿಸಿಸಿಗೆ ಸುಮಾರು 1120ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಟಿಕೆಟ್ ಗಾಗಿ ಅರ್ಜಿ ಸಲ್ಲಿಸಬಯಸುವವರು 2 ಲಕ್ಷ ಡಿಡಿ ಕಟ್ಟಬೇಕಾಗಿದೆ. ಎಸ್ಸಿ ಮತ್ತು ಎಸ್.ಟಿಗೆ 1 ಲಕ್ಷ ಡಿಡಿ ನಿಗದಿ ಮಾಡಲಾಗಿದೆ.

ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರೇ ಸ್ವತಃ ಅರ್ಜಿ ಸಲ್ಲಿಸಿದ್ದಾರೆ. ವಿಪಕ್ಷ ನಾಯಕ ಸಿದ್ಧರಾಮಯ್ಯ ಈವರೆಗೆ ಅರ್ಜಿ ಸಲ್ಲಿಕೆ ಮಾಡಿಲ್ಲ. ಸಂಜೆಯೊಳಗೆ ಅರ್ಜಿ ಸಲ್ಲಿಸಬಹುದು ಎನ್ನಲಾಗಿದೆ.

Key words: More than -1120 applications – Congress –ticket-election