ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ.

ಬೆಂಗಳೂರು,,ಡಿಸೆಂಬರ್ ,1,2023(www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ.

ಬಸವೇಶ್ವರ ನಗರದ ಖಾಸಗಿ ಶಾಲೆಗಳಿಗೆ ಹಾಗೂ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಗೂ ಕಿಡಿಗೇಡಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಶಾಲೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಅನಾಮಿಕನೊಬ್ಬ ಇ-ಮೇಲ್ ಕಳಿಸಿದ್ದಾನೆ. ಬಾಂಬ್ ಬೆದರಿಕೆಯ ಹಿನ್ನೆಲೆ  ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಮಕ್ಕಳನ್ನು ಶಾಲೆಯಿಂದ ಮನೆಗೆ ವಾಪಸ್ ಕಳುಹಿಸಿದ್ದಾರೆ. ಇನ್ನು ಆತಂಕಗೊಂಡ ಪೋಷಕರು ಶಾಲೆ ಬಳಿ ಓಡೋಡಿ ಬಂದು ತಮ್ಮ-ತಮ್ಮ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದಾರೆ.

ಬಾಂಬ್ ಬೆದರಿಕೆ ಇ-ಮೇಲ್ ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಬೆದರಿಕೆ ಬಂದಿರುವ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

Key words: More than -15 schools – Bangalore- received -bomb threat calls.