ನಾಳೆ 6 ಸಾವಿರಕ್ಕೂ ಹೆಚ್ಚು ಲಾರಿಗಳು ರಸ್ತೆಗಿಳಿಯಲ್ಲ- ಮೈಸೂರು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಕೋದಂಡರಾಮ ಹೇಳಿಕೆ…

ಮೈಸೂರು,ಫೆಬ್ರವರಿ,25,2021(www.justkannada.in):  ಪೆಟ್ರೋಲ್, ಡಿಸೆಲ್ ದರ ಏರಿಕೆ ಖಂಡಿಸಿ ನಾಳೆ ಪ್ರತಿಭಟನೆ ನಡೆಸುತ್ತೇವೆ. ನಾಳೆ 6 ಸಾವಿರಕ್ಕೂ ಹೆಚ್ಚು ಲಾರಿಗಳು ರಸ್ತೆಗಿಳಿಯಲ್ಲ ಎಂದು ಮೈಸೂರು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಕೋದಂಡರಾಮ ತಿಳಿಸಿದರು.jk

ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಕೋದಂಡರಾಮ, ಲಾರಿ ಮಾಲೀಕರ ಸಂಘದ ಬಂದ್ ಕರೆಗೆ ಟ್ಯಾಕ್ಸಿ, ಬಸ್ ಮಾಲೀಕರ ಸಂಘವೂ ಬೆಂಬಲ ನೀಡಿದೆ. ನಾಳೆ ಸಾಂಕೇತಿಕವಾಗಿ ಜಿಲ್ಲಾಧಿಕಾರಿ ಬಳಿ ಪ್ರತಿಭಟನೆ ಮಾಡುತ್ತೇವೆ. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಿದ್ದೇವೆ ಎಂದರು. More than 6,000- trucks - not – road- tomorrow-bandh-Mysore Lorry Owners Association -President

ಕೇಂದ್ರ ಸರ್ಕಾರ ದಿನನಿತ್ಯ ಪೆಟ್ರೋಲ್ ಡೀಸೆಲ್ ಬೆಲೆ ಏರಿಸುತ್ತಿದೆ. ಅಲ್ಲದೇ ಟೋಲ್ ದರ ಏರಿಕೆ ಹಾಗೂ ಇ-ವೇ ಬಿಲ್ ನಿಂದ ಲಾರಿ ಮಾಲೀಕರಿಗೆ ತೊಂದರೆಯಾಗಿದೆ. ಈ ಬಗ್ಗೆ ಸಾಕಷ್ಟು ದಿನಗಳಿಂದಲೂ ಪ್ರತಿಭಟನೆ ಮಾಡುತ್ತಿದ್ದೇವೆ. ಆದರೆ ಕೇಂದ್ರ ಸರ್ಕಾರ ಈ ಬಗ್ಗೆ ಗಮನ ಹರಿಸುತ್ತಿಲ್ಲ. ಹಾಗಾಗಿ ನಾಳೆ ಬಂದ್ ಗೆ ಬೆಂಬಲ ನೀಡಿ ಪ್ರತಿಭಟನೆ ನಡೆಸುತ್ತೇವೆ. ಬೇಡಿಕೆ ಈಡೇರದಿದ್ದಲ್ಲಿ ಮುಂದೆ ಉಗ್ರ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

Key words: More than 6,000- trucks – not – road- tomorrow-bandh-Mysore Lorry Owners Association -President